ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆ, ಕರ್ನಾಟಕ ಲೋಕಸೇವಾ ಆಯೋಗದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು 2021ರ ಏಪ್ರಿಲ್ 22 ರಿಂದ 30 ರವರೆಗೆ ನಡೆಸಲು ನಿಗದಿಪಡಿಸಿಲಾಗಿತ್ತು. ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಭ್ಯರ್ಥಿಗಳು 2021ರ ಏಪ್ರಿಲ್ 22 ರಿಂದ ಏಪ್ರಿಲ್ 28 ರವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗಿತ್ತು.
ಇನ್ನು 2021ರ ಏಪ್ರಿಲ್ 29 ಮತ್ತು 30 ರಂದು ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಾಗಬೇಕಿತ್ತು. ಆದರೆ, ರಾಜ್ಯ ಸರ್ಕಾರ ಏಪ್ರಿಲ್ 21 ರಿಂದ ಮೇ 04 ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ, 2021ಎ ಏಪ್ರಿಲ್ 22 ರಿಂದ 30 ರವರೆಗೆ ನಡೆಯಬೇಕಿದ್ದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮುಂದಿನ ಪರೀಕ್ಷಾ ದಿನಾಂಕಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಂತರ್ಜಾಲ http://kpsc.kar.nic.in ಇಲ್ಲಿ ಪ್ರಕಟವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.