Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಮುಷ್ಕರ: ಬಸ್‌ ಇಲ್ಲದೆ ಪರದಾಡುತ್ತಿರುವ ಪ್ರಯಾಣಿಕರು

ಖಾಸಗಿ ಬಸ್‌ ಹಾಕುತ್ತೇವೆ ಎಂಬ ಸರ್ಕಾರ * ಸಮರ್ಪಕ ಬಸ್‌ ಇಲ್ಲದೇ ಹಿಡಿ ಶಾಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಇಂದಿನಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ಸಾರಿಗೆ ನೌಕರರು ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದುವರೆಗೂ ಸಬೂಬು ಹೇಳಿಕೊಂಡು ಬಂದಿದ್ದು, ಯಾವುದೇ ಪ್ರಮುಖ ಬದಲಾವಣೆ ಆಗದ ಕಾರಣ ನಾಳೆಯಿಂದ ಮುಷ್ಕರ ಮಾಡುತ್ತಿದ್ದಾರೆ.

ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಯತ್ನಿಸುತ್ತಿದ್ದು, ಇಂದು ಮೈಸೂರು, ಬೆಂಗಳೂರಿನಲ್ಲಿ ಖಾಸಗಿ ಬಸ್‌ಗಳನ್ನು ಬಿಡಲಾಗುತ್ತಿದೆ. ಆದರೆ ಸಮರ್ಪಕವಾಗಿ ಸೇವೆ ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.

ಸಾರ್ವಜನಿಕರು ಸರ್ಕಾರಕ್ಕೆ ಬಸ್‌ ಬಂದ್‌ ಮಾಡಿರುವ ನೌಕರರ ಬೇಡಿಕೆ ಈಡೇರಿಸಿದೆ ಈ ರೀತಿ ಜನರಿಗೆ ತೊಂದರೆ ಕೊಡುವುದು ಎಷ್ಡು ಸರಿ ಎಂದು ಹಿಡಿ ಶಾಪಹಾಕುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಜನರಿಗೆ ತೊಂದರೆ ಆದರೂ ಸರಿ ನಾವು ಈಗೋವನ್ನು ಬಿಟ್ಟುಕೊಡುವುದಿಲ್ಲ ಎಂಬ ಧೋರಣೆ ಅನುಸರಿಸುತ್ತಿದ್ದಾರೆ.

ಈ ನಡುವೆ ನಮ್ಮ ಕೆಲಸ ಹೋದರೂ ಚಿಂತೆಯಿಲ್ಲ. ನಾವು ಇನ್ನು ಎಷ್ಟುದಿನ ಅಧಿಕಾರಿಗಳ ಕಿರುಕುಳ, ಕಡಿಮೆ ವೇತನಕ್ಕೆ ದುಡಿಯೋಣ ಹೇಳಿ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸವ ನಮಗೆ ಮಗಲು ಜಾಗವಿಲ್ಲ. ಒಂದು ರೀತಿ ಬೀದಿ ನಾಯಿಯಂತೆ ಸೊಳ್ಳೆಗಳು ಚಳಿಯಿಂದಲೇ ರಾತ್ರಿ ಪೂರ ಕಳೆಯಬೇಕು. ಸರಿಯಾದ ನಿದ್ರೆಯೂ ಇಲ್ಲ.

ಜತೆಗೆ ಎದ್ದಕೂಡಲೇ ನಿತ್ಯಕರ್ಮಗಳನ್ನು ಮುಗಿಸಲು ಸರಿಯಾದ ವ್ಯವಸ್ಥೆ ಇಲ್ಲ. ಇಂಥ ಪರಿಸ್ಥಿತಿಯಲ್ಲೂ ಸಂಸ್ಥೆಗೆ ಆದಾಯ ತರುತ್ತಿದ್ದೇವೆ. ಆದರೆ ಅದು ಸೋರಿಕೆಯಾಗುತ್ತಿದ್ದು, ಆ ಸೋರಿಕೆ ತಡೆಗೆ ಸರ್ಕಾರ ಮುಂದಾಗಿಲ್ಲ. ಅದರೆ ನಮಗೆ ವೇತನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಟ್ಟಾರೆ ಇಂದಿನಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ ‌ಹೇಳುತ್ತಿದ್ದಾರೆ.

Leave a Reply

error: Content is protected !!
LATEST
KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್ 4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ