Vijayapatha – ವಿಜಯಪಥ
Friday, November 1, 2024
Breaking Newsನಮ್ಮರಾಜ್ಯರಾಜಕೀಯ

ಏಕಾಏಕಿ ಬೇಡಿಕೆ ಹೆಚ್ಚಾದ್ದರಿಂದ ಲಸಿಕೆ ಸಮಸ್ಯೆ: ಗೃಹ ಸಚಿವ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಏಕಾಏಕಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಸಿಕೆ ಸಮಸ್ಯೆಯಾಗಿರುವುದು ನಿಜ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ನಾವು ಲಸಿಕೆ ತರಿಸಿಕೊಳ್ಳಲು ಕ್ರಮವಹಿಸಿದ್ದೇವೆ. ಲಸಿಕೆ ಸಿಗುವುದಿಲ್ಲ ಎಂದು ಜನ ಆತಂಕದಿಂದ ಕೇಂದ್ರಗಳಿಗೆ ಬಂದಿದ್ದಾರೆ. ಪ್ರತಿಯೊಬ್ಬರಿಗೂ ಲಸಿಕೆ ಸಿಗಲಿದೆ ಯಾರೂ ಆತಂಕಪಡಬೇಕಾಗಿಲ್ಲ ಎಂದರು.

ಇನ್ನು ರಾಜ್ಯದಲ್ಲಿ ಪೂರೈಕೆಯಲ್ಲಿನ ವ್ಯತ್ಯಯದಿಂದ ಲಸಿಕೆ ಸಮಸ್ಯೆ ಆಗಿದೆ. ಬೆಂಗಳೂರಿನಲ್ಲಿ ನೊಡೆಲ್ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸತ್ತವರ ಬಗ್ಗೆ ಮಾಹಿತಿ ನೀಡದ ಮೂರು ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಬೆಡ್ ಖಾಲಿಯಾದ ತಕ್ಷಣ ಮಾಹಿತಿ ನೀಡುವಂತಹ ವ್ಯವಸ್ಥೆ ಜಾರಿಗೆ ತರಲಾಗಿದೆ. ಹೀಗಾಗಿ ಮುಂದೆ ಬೆಡ್ ಅಭಾವ ಇರದಂತೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಲಾಗುವುದು. ಈ ಬಗ್ಗೆ ಹೋಟೆಲ್ ಸಂಘ ಹಾಗೂ ಖಾಸಗಿ ಆಸ್ಪತ್ರೆಗಳ ಜತೆ ಚರ್ಚೆಮಾಡಲಾಗಿದೆ. ಈಗಾಗಲೇ 1200 ಆ ರೀತಿ ಬೆಡ್‍ಗಳನ್ನು ಖಾಸಗಿ ಆಸ್ಪತ್ರೆಗಳು ಮಾಡಿಕೊಂಡಿವೆ. ಮತ್ತೆ 2 ಸಾವಿರ ಬೆಡ್ ಗಳ ಸ್ಟೆಪ್ ಡೌನ್ ಆಸ್ಪತ್ರೆ ಮೂರು ದಿನಗಳಲ್ಲಿ ನಿರ್ಮಾಣವಾಗಲಿದೆ. ಅಲ್ಲಿ ಸರ್ಕಾರ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಿ ರೋಗಿಗಳ ಪ್ರಾಣ ರಕ್ಷಣೆ ನೆರವು ನೀಡಲು ಮುಂದಾಗುತ್ತದೆ ಎಂದು ಮಾಹಿತಿ ನೀಡಿದರು.

ಲಾಕ್‍ಡೌನ್ ನಲ್ಲಿ ಲಾಠಿ ಬೀಸಲು ಅವಕಾಶ ಕೊಡದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಲಾಠಿ ಬೀಸೋದು, ವಾಹನಗಳ ಸೀಜ್, ಕೇಸ್ ಹಾಕೋದೇ ಮುಖ್ಯ ಅಲ್ಲ. ಕೋವಿಡ್ ನಿಂದ ಸಾವು ನೋವುಗಳಾಗುತ್ತಿವೆ. ಜನ ಅರ್ಥಮಾಡಿಕೊಂಡು ಸಹಕಾರ ನೀಡಬೇಕು, ಜನರ ಸುರಕ್ಷತೆಗಾಗಿ ಮಾಡಿರುವ ಲಾಕ್ ಡೌನ್ ಇದು. ಹೊರಗೆ ಬರಬೇಡಿ ಸರ್ಕಾರಕ್ಕೆ ಸಹಕಾರ ಕೊಡಿ ಎಂದರು.

ಹಲವು ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ಐಸಿಯುಗಳೂ ಸಿಗಲಿದೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಬೆಡ್ ಕೊರತೆ ಇಲ್ಲದಂತೆ ನೋಡಿಕೊಳ್ಳುತ್ತೇವೆ. ಕೊರೊನಾ ಟೆಸ್ಟ್ ಕಡಿಮೆಮಾಡುತ್ತಿಲ್ಲ. ಅದಕ್ಕೊಂದು ಪ್ರೊಸಿಜರ್ ಇದೆ ಅದರ ಪ್ರಕಾರ ಟೆಸ್ಟ್ ಮಾಡಲಾಗುತ್ತಿದೆ. ಕಿಟ್ ಗಳ ಲಭ್ಯ ಇದೆ. ಈವರೆಗೆ 30 ಬೆಡ್ ಗಳ ಖಾಸಗಿ ಆಸ್ಪತ್ರೆಗಳನ್ನು ಪರಿಗಣಿಸಿರಲಿಲ್ಲ. ಅಂತಹ ಹಾಸ್ಪಿಟಲ್ ಗಳ ಮೂಲಕವೂ ಸುಮಾರು 2ಸಾವಿರ ಬೆಡ್ ಪಡೆಯಲು ಅವಕಾಶ ಇದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಸೂಕ್ತ ನೆರವು ನೀಡಿ ಆ ಸೌಲಭ್ಯವನ್ನೂ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ