Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯಶಿಕ್ಷಣ-

PRIMARY SCHOOL REOPEN 20 ತಿಂಗಳು ಬಳಿಕ- ಇಂದು 1 ರಿಂದ 5ನೇ ತರಗತಿವರೆಗಿನ ಶಾಲೆಗಳು ಆರಂಭ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈಗಾಗಲೇ ಕಾಲೇಜು, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಇನ್ನು 20 ತಿಂಗಳು ಬಳಿಕ ಇಂದಿನಿಂದ 1 ರಿಂದ 5ನೇ ತರಗತಿವರೆಗಿನ ಶಾಲೆಗಳು ಆರಂಭವಾಗುತ್ತಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊರೊನಾ ಲಸಿಕೆ ಬಂದರೂ ಸೋಂಕಿನ ಆತಂಕ ಇನ್ನು ಕಡಿಮೆ ಆಗಿಲ್ಲ. ಈ ಕೊರೊನಾ ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತ ಕ್ರಮಗಳೊಂದಿಗೆ ಶಾಲೆ ಆರಂಭಿಸೋದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು.

ಬೇಗ ಮಕ್ಕಳನ್ನು ಶಾಲೆಗೆ ವಾಪಸ್ ಕರೆಸಿಕೊಳ್ಳಬೇಕು. ಆನ್ ಲೈನ್ (Online Class) ತರಗತಿ ನಿಲ್ಲಿಸಿ, ಬೌತಿಕ ತರಗತಿಗಳನ್ನ ಶುರು ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಇಂದಿನಿಂದ 1 ರಿಂದ 5ನೇ ತರಗತಿವೆರೆಗೆ ಶಾಲೆಗಳು ಆರಂಭವಾಗುತ್ತಿವೆ.

ಮಧ್ಯಾಹ್ನದವರೆಗಷ್ಟೇ ಕ್ಲಾಸ್: ಆರಂಭದಲ್ಲೇ ಮಕ್ಕಳಿಗೆ ಪೂರ್ಣಾವಧಿ ತರಗತಿಗಳು ಇರುವುದಿಲ್ಲ. ಈಗಾಗಲೇ ಕೊರೊನಾ ಹಾಗೂ ಇನ್ನಿತರ ವಿಚಾರಗಳಿಂದ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ ಏಕಾಏಕಿಯಾಗಿ ಪೂರ್ಣಾವಧಿ ತರಗತಿಗಳು ಮಾಡದೆ ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್ ನಡೆಸಲು ಇಲಾಖೆ ಮುಂದಾಗಿದೆ.

ಮುಂದಿನ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಅರಿತುಕೊಂಡು ತಜ್ಞರ ಅಭಿಪ್ರಾಯ ಪಡೆದು ತರಗತಿ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಬಿಸಿಯೂಟ ಕಾರ್ಯಕ್ರಮ ನಿಲ್ಲಿಸಲಾಗಿತ್ತು. ಆದರೆ, ಇಂದಿನಿಂದ ಬಿಸಿಯೂಟ ಕಾರ್ಯಕ್ರಮಕ್ಕೂ ಶಿಕ್ಷಣ ಇಲಾಖೆ ಚಾಲನೆ ನೀಡುತ್ತಿದೆ.

* ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ

* ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಓಪನ್

* ಇನ್ನುಳಿದ ಎರಡು ದಿನ ಶಾಲೆ ಕೊಠಡಿ ಗಳ ಸ್ವಚ್ಛತಾ ಕಾರ್ಯ ಸ್ಯಾನಿಟೈಸರ್ ಗೆ ಅವಕಾಶ

* ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ

* ಪಾಸಿಟಿವಿಟಿ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆ, ತಾಲೂಕು ವಲಯಗಳಲ್ಲಿ ಮಾತ್ರ ಶಾಲೆ ಆರಂಭ

* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ

* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು

* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

* ಆನ್ ಲೈನ್ & ಆಫ್ ಲೈನ್ ಎರಡೂ ತರಗತಿಗೂ ಅವಕಾಶ

* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು

* ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ

* ಶಾಲೆಗೆ ಬರುವ ಮಕ್ಕಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

ಶಾಲೆ ಆರಂಭದ ಬೆನ್ನಲ್ಲೇ ಶಿಕ್ಷಕರ ಪ್ರತಿಭಟನೆ: ಇತ್ತ ಸರ್ಕಾರಿ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಒಂದು ವೇಳೆ ಸರ್ಕಾರ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

ಪ್ರತಿಭಟನೆ ಜೊತೆ ಶಾಲಾ ತರಗತಿಗಳನ್ನು ಸಹ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಮಾಹಿತಿ ನೀಡಿದ್ದಾರೆ.

ಶಿಕ್ಷಕರ ಬೇಡಿಕೆಗಳೇನು?: ಪದವೀಧರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆಗಬೇಕು. ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಮಾಡುವುದು. ಮುಖ್ಯ ಗುರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡುವುದು.

ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು. ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನೀಗಿಸುವುದು ಮತ್ತು ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರ ಪರಿಹಾರ ಮಾಡಬೇಕು ಎಂಬುವುದು ಸೇರಿ ಇತರ ಪ್ರಮುಖ ಬೇಡಿಕಗಳನ್ನು ಶಿಕ್ಷಕರು ಸರ್ಕಾರದ ಮುಂದಿಡುತ್ತಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ