Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

2000 ಕೋಟಿ ರೂ. ನೀರಾವರಿ ಕಿಕ್‌ಬ್ಯಾಕ್‌ ಆರೋಪ ತನಿಖೆ ಯಾಕಿಲ್ಲ: ಎಚ್‌ಡಿಕೆ ಪ್ರಶ್ನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150 ಕೋಟಿ ರೂ. ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 2000 ಕೋಟಿ ರೂ. ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ.ಈಗ ತನಿಖೆ ಯಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿಎಂ ಬಿಎಸ್‌ವೈ ಅವರನ್ನು ಪ್ರಶ್ನಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ @BSYBJP
2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ