NEWSನಮ್ಮರಾಜ್ಯರಾಜಕೀಯ

ಒಬ್ಬ ಭ್ರಷ್ಟ ಸಿಎಂ ಹೋಗಬೇಕು: ವಿಪಕ್ಷದ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಬ್ಬ ಭ್ರಷ್ಟ ಸಿಎಂ ಹೋಗಬೇಕು. ಯಡಿಯೂರಪ್ಪ ಬದಲಾವಣೆಯಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಬದಲಾಗಿ ಒಬ್ಬ ಕರೆಪ್ಟ್ ಸಿಎಂ ಹೋಗ್ತಿದ್ದಾರೆ ಅನ್ನೋದು ಮುಖ್ಯ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸ್ತಾರೆ ಎಂದು ನಾನು ಈ ಮೊದಲೇ ಹೇಳಿದ್ದೆ. ಆಗ ಯಾರು ನನ್ನ ಮಾತನ್ನು ನಂಬಿರಲಿಲ್ಲ. ಈಗ ಆ ಕಾಲ ಸನ್ನಿಹಿತವಾಗಿದೆ ಎಂದು ನೋಡಿ ಎಂದರು.

ಯಡಿಯೂರಪ್ಪ ಬದಲಾವಣೆಯಿಂದ ಅವಧಿಗೂ ಮುನ್ನ ಚುನಾವಣೆ ಬರಲಿದೆ ಅಂತ ನನಗೆ ಅನಿಸಲ್ಲ. ಸಿಎಂ ಬದಲಾದರೂ ಅವಧಿಗೂ ಮುನ್ನ ಎಲೆಕ್ಷನ್ ಆಗುತ್ತೆ ಅನಿಸುತ್ತಿಲ್ಲ. ಚುನಾವಣೆ ಬಂದರೆ ಎದುರಿಸಲು ಕಾಂಗ್ರೆಸ್ ಸಿದ್ಧವಿದೆ. ಯಾವ ಸಮಯದಲ್ಲಿ ಬಂದರೂ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ನಿಮಗೆ ಹೇಳಕ್ಕೆ ಆಗುತ್ತಾ? ನನಗೂ ಅದರ ಬಗ್ಗೆ ಗೊತ್ತಿಲ್ಲ. ರಾಹುಲ್ ಗಾಂಧಿ ನಮ್ಮ ವರಿಷ್ಠರು ಕರೆದಿದ್ದಾರೆ ಹೋಗುತ್ತಿದ್ದೇನೆ ಎಂದರು.

ಪದಾಧಿಕಾರಿಗಳ ನೇಮಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮಗೆ ಹೇಳಿದ್ದಾರಾ? ಯಾವ ವಿಚಾರಕ್ಕೆ ಕರೆದಿದ್ದಾರೆ ಅನ್ನೋದು ಯಾರಿಗೆ ಗೊತ್ತು. ಸುಮ್ಮನೆ ಊಹಾಪೋಹ ಮಾಡಬೇಡಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ