ಹೊಸಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಇಂಗಳಗಿ ಕ್ರಾಸ್ ಬಳಿ ಜರುಗಿದೆ.
ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಶ್ರೀ ಶೈಲಕ್ಕೆ ಹೋಗುತಿದ್ದ ಬಸ್ ಮಾರ್ಗಮಧ್ಯದಲ್ಲಿ ಅಪಘಾತಗೀಡಾಗಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಶಶಿಕುಮಾರ್(22) ಮೃತಪಟ್ಟಿದ್ದಾರೆ.
ಬಸ್ನಲ್ಲಿ ಇದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅಪಘಾತಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದು ಬಂದಿದೆ.
ಅವಗಢದಿಂದ ಗಾಯಗೊಂಡ ಪ್ರಯಾಣಿಕರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಪೇಟೆ ಸಂಚಾರಿ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂದು ಮುಂದಿನ ಕ್ರಮ ಜರುಗಿಸಿದ್ದಾರೆ.