NEWSನಮ್ಮರಾಜ್ಯಶಿಕ್ಷಣ-

10ನೇ ತರಗತಿವರೆಗೂ ಆರ್‌ಟಿಇ ವಿಸ್ತರಣೆಗೆ ಆಮ್‌ ಆದ್ಮಿ ಪಾರ್ಟಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಗೆ ತಿದ್ದುಪಡಿ ತಂದು, ಅದರ ವ್ಯಾಪ್ತಿಯನ್ನು ಒಂಬತ್ತು ಹಾಗೂ ಹತ್ತನೇ ತರಗತಿಗಳಿಗೂ ವಿಸ್ತರಿಸಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಪಕ್ಷದ ಮಾಧ್ಯಮ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಮಹಿಳಾ ಮುಖಂಡರಾದ ಉಷಾ ಮೋಹನ್‌, “ಪ್ರಸ್ತುತ ಎಂಟನೇ ತರಗತಿಯವರೆಗೆ ಮಾತ್ರ ಆರ್‌ಟಿಇ ಕಾಯ್ದೆ ಅನ್ವಯಿಸುತ್ತಿದೆ. ಆದ್ದರಿಂದ 9 ಹಾಗೂ 10ನೇ ತರಗತಿ ಸೇರುವ ಬಡ ಕುಟುಂಬದ ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ಭಾರೀ ಮೊತ್ತದ ಶುಲ್ಕ ಪಡೆಯುತ್ತಿವೆ.

ಇನ್ನು ಶುಲ್ಕ ಪಾವತಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣದಿಂದ ವಂಚಿತರಾಗಬೇಕಾದ ಅನಿವಾರ್ಯ ಸ್ಥಿತಿ ಎದುರಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಶೀಘ್ರವೇ ಕಾಯ್ದೆಗೆ ತಿದ್ದುಪಡಿ ತಂದು ಬಡ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

“ಕೋವಿಡ್‌ ಹಾಗೂ ಲಾಕ್‌ಡೌನ್‌ನಿಂದಾಗಿ ಬಡ ಪೋಷಕರು ಎರಡು ವರ್ಷಗಳ ಕಾಲ ಆದಾಯವಿಲ್ಲದೇ ಆರ್ಥಿಕವಾಗಿ ದುರ್ಬಲವಾಗಿದ್ದಾರೆ. ಆದ್ದರಿಂದ 2020-21ನೇ ಸಾಲಿನಿಂದಲೇ ಅನ್ವಯಿಸುವಂತೆ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕು. ಅಂದರೆ, ಆರ್‌ಟಿಎ ವಿದ್ಯಾರ್ಥಿಗಳ 9 ಹಾಗೂ 10ನೇ ತರಗತಿಗಳ ಕೋವಿಡ್‌ ಅವಧಿಯ ಎರಡು ವರ್ಷದ ಶಾಲಾ ಶುಲ್ಕವನ್ನು ಸರ್ಕಾರವೇ ಭರಿಸಬೇಕು.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಈ ಬಗ್ಗೆ ನಿರ್ಲಕ್ಷ್ಯ ಮುಂದುವರಿಸಿದರೆ ಆಮ್‌ ಆದ್ಮಿ ಪಾರ್ಟಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಉಷಾ ಮೋಹನ್‌ ಎಚ್ಚರಿಕೆ ನೀಡಿದರು.

ಚಿಕ್ಕಪೇಟೆ ವಾರ್ಡ್‌ ಎಎಪಿ ಅಧ್ಯಕ್ಷ ಗೋಪಿನಾಥ್‌ ಮಾತನಾಡಿ, “ಖಾಸಗಿ ಶಾಲೆಯ ದುಬಾರಿ ಶುಲ್ಕ ಕಟ್ಟಲು ಸಾಧ್ಯವಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಸೇರಲು ಬಯಸುತ್ತಿದ್ದಾರೆ.

ಆದರೆ ಅವರಿಗೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕೆಲವು ಖಾಸಗಿ ಶಾಲೆಗಳು ಸತಾಯಿಸುತ್ತಿವೆ. ಭಾರೀ ಹಣ ಪಡೆದು ವರ್ಗಾವಣೆ ಪತ್ರ ನೀಡುತ್ತಿರುವ ಘಟನೆಗಳು ಅಲ್ಲಲ್ಲಿ ಕಂಡುಬರುತ್ತಿವೆ. ಬಡವರ ಅಸಹಾಯಕತೆಯ ಲಾಭ ಪಡೆಯುವ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ವರ್ಗಾವಣೆ ಪತ್ರ ಇಲ್ಲದೆಯೇ ಸರ್ಕಾರಿ ಶಾಲೆ ಸೇರುವ ವ್ಯವಸ್ಥೆ ಕಲ್ಪಿಸಿದ್ದು, ರಾಜ್ಯದಲ್ಲೂ ಅದೇ ಮಾದರಿಯ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ