Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಅಧಿಕಾರ ಮದದಲ್ಲಿರುವ ಬಿಜೆಪಿಗೆ ಪಾಠ ಕಲಿಸಲು ಯುವಜನತೆ ಆಮ್‌ ಆದ್ಮಿ ಪಾರ್ಟಿ ಬೆಂಬಲಿಸಿ: ರಾಘವೇಂದ್ರ ಚಿಂಚನಸೂರ್‌

ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ರಾಘವೇಂದ್ರ ಚಿಂಚನಸೂರ್‌, ಬಿಜೆಪಿ ಐಟಿ ಸೆಲ್ ಪ್ರಮುಖ ಶರಣ್ ಎಎಪಿ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಧಿಕಾರದ ಮದದಲ್ಲಿ ಜನವಿರೋಧಿ ಆಡಳಿತ ನೀಡುತ್ತಿರುವ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ನಾಡಿನ ಯುವಜನತೆಯು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸಬೇಕೆಂದು ರಾಘವೇಂದ್ರ ಚಿಂಚನಸೂರ ಹೇಳಿದ್ದಾರೆ.

ಬಿಜೆಪಿಯ ಕಲಬುರಗಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾಗಿರುವ ರಾಘವೇಂದ್ರ ಚಿಂಚನಸೂರ ಮತ್ತು ಕಲಬುರಗಿ ಬಿಜೆಪಿಯ ಐಟಿ ಸೆಲ್ ಪ್ರಮುಖ ಶರಣ್‌ ಅವರು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಮ್‌ ಆದ್ಮಿ ಪಾರ್ಟಿ ಸೇರಿದ ಬಳಿಕ ಮಾತನಾಡಿದರು.

ಜನಸೇವೆ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದ ನಾನು ದಲಿತರಿಗೆ, ಹಿಂದುಳಿದವರಿಗೆ ಹಾಗೂ ಸಮಾಜದ ದಮನಿತ ಜನರಿಗೆ ಸಂವಿಧಾನ ಬದ್ಧವಾದ ಸೇವೆ, ಸೌಕರ್ಯಗಳು ಸಿಗುವಂತೆ ಮಾಡಲು ಹೋರಾಡುತ್ತಿದ್ದೇನೆ. ಇದಕ್ಕಾಗಿ “ಸ್ವಾಭಿಮಾನ ಜನತಾ ಸಂಘ” ಎಂಬ ಸಂಘಟನೆಯನ್ನು ರಚಿಸಿಕೊಂಡು ಕಳೆದ ಒಂದೂವರೆ ದಶಕದಿಂದ ಸಮಾಜದ ದನಿಯಾಗಿದ್ದೇನೆ.

ಬಿಜೆಪಿಯಲ್ಲಿ ನಂಬಿಕೆಯಿಟ್ಟು ಆ ಪಕ್ಷವನ್ನು ಸೇರಿದ್ದೆ. ಆದರೆ ಜನವಿರೋಧಿಯಾಗಿರುವ ಬಿಜೆಪಿಯಿಂದ ದಲಿತರು ಸೇರಿದಂತೆ ಯಾರಿಗೂ ಉಪಯೋಗವಿಲ್ಲ ಎಂಬುದು ಅರಿವಾಗಿದೆ. ಕಲಬುರಗಿ ಸೇರಿದಂತೆ ಸಂಪೂರ್ಣ ಉತ್ತರ ಕರ್ನಾಟಕವನ್ನು ಬಿಜೆಪಿ ಕಡೆಗಣಿಸುತ್ತಿದೆ” ಎಂದು ಚಿಂಚನಸೂರ ಆರೋಪಿಸಿದರು.

ಆಮ್‌ ಆದ್ಮಿ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು ಮಾತನಾಡಿ, ರಾಘವೇಂದ್ರ ಚಿಂಚನಸೂರರವರು ದಲಿತರು, ಹಿಂದುಳಿದವರು ಹಾಗೂ ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಾಯಕರಾಗಿದ್ದಾರೆ.

ಜನರ ಕಷ್ಟಗಳಿಗೆ ಸ್ಪಂದಿಸಿದ ಅನುಭವ ಅವರಿಗಿದೆ. ಅವರ ಸೇರ್ಪಡೆಯಿಂದ ವಿಶೇಷವಾಗಿ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಆನೆಬಲ ಬಂದಂತಾಗಿದೆ. ಅಲ್ಲಿನ ಇನ್ನಷ್ಟು ಯುವ ನಾಯಕರು ಪಕ್ಷ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಎಪಿಯ ರಾಜ್ಯ ಉಪಾಧ್ಯಕ್ಷ ವಿಜಯ್‌ ಶರ್ಮಾ ಹಾಗೂ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ...