NEWSನಮ್ಮರಾಜ್ಯಶಿಕ್ಷಣ-

ಎಎಪಿಯಿಂದ ಚಿಂತನ-ಮಂಥನ: ಶಾಲಾ ಶುಲ್ಕ ನೆರವಿಗೆ ದಾವಿಸಲು ಸರ್ಕಾರಕ್ಕೆ ಪೋಷಕರ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸರ್ಕಾರ ಸಹಾಯ ಮಾಡಬೇಕೆಂದು ಚಿಂತನ-ಮಂಥನ ಕಾರ್ಯಕ್ರಮದಲ್ಲಿ ನೂರಾರು ಪೋಷಕರು ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಈ ಕಾರ್ಯಕ್ರಮ ಆಯೋಜಿಸಿತ್ತು. ಕಳೆದ ಒಂದೂವರೆ ವರ್ಷಗಳಲ್ಲಿ ಲಾಕ್‌ಡೌನ್‌ನಿಂದಾಗಿ ಆದಾಯ ಹಾಗೂ ಉಳಿತಾಯವನ್ನು ಕಳೆದುಕೊಂಡು ಪೋಷಕರು ಸಂಕಷ್ಟದಲ್ಲಿದ್ದಾರೆ. ಈಗ ಸರ್ಕಾರವು ಅವರಿಗೆ ಸಹಾಯ ಮಾಡದಿದ್ದರೆ ಅನೇಕರಿಗೆ ತಮ್ಮ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸಲು ಸಾಧ್ಯವಾಗುವುದಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡರು.

“ಪತಿ ಹಾಗೂ ತಂದೆಯನ್ನು ಕಳೆದುಕೊಂಡಿರುವ ನಾನು ಇಬ್ಬರು ಮಕ್ಕಳನ್ನು ಓದಿಸಲು ಹಲವು ಮನೆಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಲಾಕ್‌ಡೌನ್‌ನಿಂದಾಗಿ ನನಗೆ ಒಂದೂವರೆ ವರ್ಷ ಉದ್ಯೋಗವಿರಲಿಲ್ಲ. ನಾನು ಮಕ್ಕಳ ಶಾಲಾ ಶುಲ್ಕ ಪಾವತಿಸಲು ಹೇಗೆ ಸಾಧ್ಯ” ಎಂದು ಪೋಷಕರಾದ ಪವಿತ್ರ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್‌ ಕುಮಾರ್‌, “ಪೋಷಕರಿಗೆ ನೆರವಾಗಲು ಸರ್ಕಾರ ಏನನ್ನಾದರೂ ಮಾಡಲೇ ಬೇಕು. ದೀರ್ಘಾವಧಿಯಲ್ಲಿ, ಸರ್ಕಾರಿ ಶಾಲೆಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಬೇಕು” ಎಂದು ಹೇಳಿದರು.

“ಕಾನೂನಿನ ಪ್ರಕಾರ ಗುಣಮಟ್ಟದ ಹಾಗೂ ಉಚಿತ ಶಿಕ್ಷಣ ಪಡೆಯುವ ಹಕ್ಕನ್ನು ಮಕ್ಕಳು ಹೊಂದಿದ್ದಾರೆ. ಆದರೆ ಬಿಜೆಪಿ ಸರ್ಕಾರವು ಈ ಸಂಕಷ್ಟದ ಸಮಯದಲ್ಲಿ ಪೋಷಕರಿಗೆ ನೆರವಾಗಲು ನಿರ್ಲಕ್ಷ್ಯ ತೋರುತ್ತಿದೆ. ಅವರ ಬೇಡಿಕೆಗಳನ್ನು ಕೇಳಿ ನೆರವಾಗಲು ಸರ್ಕಾರ ಮುಂದಾಗಬೇಕು” ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಬೆಂಗಳೂರು ನಗರದ ಎಎಪಿ ಅಧ್ಯಕ್ಷರಾದ ಮೋಹನ್‌ ದಾಸರಿ ಮಾತನಾಡಿ, “ಇಲ್ಲಿ ಕೇಳಿಬಂದ ಪೋಷಕರ ಬೇಡಿಕೆಗಳನ್ನು ನಾವು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರವರಿಗೆ ತಲುಪಿಸುತ್ತೇವೆ ಹಾಗೂ ಶಾಲಾ ಶುಲ್ಕಕ್ಕೆ ಸಂಬಂಧಿಸಿ ಪೋಷಕರಿಗೆ ನೆರವಾಗುವಂತಹ ವಿಸ್ತೃತ ಯೋಜನೆಯನ್ನು ಶೀಘ್ರದಲ್ಲೇ ರೂಪಿಸಬೇಕು ಹಾಗೂ ಪರಿಣಾಮಕಾರಿಯಾದ ಶಾಲಾ ನಿರ್ವಹಣಾ ಸಮಿತಿಗಳನ್ನು ರಚಿಸಬೇಕೆಂದು ಆಗ್ರಹಿಸುತ್ತೇವೆ ಎಂದರು.

ದೆಹಲಿಯ ಎಎಪಿ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲೇ ಇಲ್ಲೂ ಕೂಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಪೋಷಕರ ಸಂಘಟನೆಗಳು, ಸಮನ್ವಯ ಸಮಿತಿ ಹಾಗೂ ವಾಯ್ಸ್‌ ಆಫ್‌ ಪೇರೆಂಟ್ಸ್‌ ಸಂಘಟನೆಗಳು ಸರ್ಕಾರವು ನೆರವು ನೀಡದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದವು. ತಮಗೆ ಬೆಂಬಲವಾಗಿರುವ ಎಎಪಿಯನ್ನು ಪೋಷಕರು ಶ್ಲಾಘಿಸಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ