NEWSನಮ್ಮರಾಜ್ಯಸಿನಿಪಥ

ನಟಿ ಪ್ರಿಯಾಂಕಾ ಚಿಂಚೋಳಿ ರಿಜಿಸ್ಟರ್ ಮದುವೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಧಾರಾವಾಹಿ ಖ್ಯಾತಿಯ ನಟಿ ಪ್ರಿಯಾಂಕಾ ಚಿಂಚೋಳಿ ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ಸುದ್ದಿಯಾಗಿದ್ದಾರೆ.

ನಟಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಪ್ರಿಯಾಂಕಾ ಅವರು ರಾಕೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಸೀಂಪಲ್ ಆಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ.

ರಾಕೇಶ್ ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದೇನೆ. 2021ರ ಡಿಸೆಂಬರ್10ರಲ್ಲಿ ಸಂಪ್ರದಾಯಬದ್ಧವಾಗಿ ಮದುವೆಯಾಗಲಿದ್ದೇನೆ. ಈಗಷ್ಟೇ ಮದುವೆ ಸಂಭ್ರಮ ಶುರುವಾಗಿದೆ. ನಿಮ್ಮೆಲ್ಲರ ಪ್ರೀತಿ-ಹಾರೈಕೆ ಬೇಕು ಎಂದು ಬರೆದುಕೊಂಡು ರಿಜಿಸ್ಟರ್ ಮ್ಯಾರೇಜ್ ಸಂದರ್ಭದಲ್ಲಿ ತೆಗೆದಿರುವ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಾನು ಮತ್ತು ರಾಕೇಶ್ ರಿಜಿಸ್ಟರ್ ಮದುವೆ ಆಗಲು ಒಂದು ಕಾರಣವಿದೆ. ರಾಕೇಶ್ ಅವರು ಅಮೆರಿಕದ ಬ್ಯಾಂಕ್ ಒಂದರಲ್ಲಿ ಉಪಾಧ್ಯರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಆತಂಕವಿರುವ ಕಾರಣದಿಂದಾಗಿ ವೀಸಾಗೆ ಸಂಬಂಧಿಸಿದಂತೆ ರಿಜಿಸ್ಟರ್ ಮದುವೆಯ ಪ್ರಮಾಣಪತ್ರದ ಅಗತ್ಯವಿದೆಯಂತೆ.

ಹೀಗಾಗಿ ರಿಜಿಸ್ಟರ್ ಮದುವೆಯಾಗಿದ್ದು, ಡಿಸೆಂಬರ್ 10-11ರಂದು ಸಾಂಪ್ರದಾಯಿಕವಾಗಿ ಬೆಂಗಳೂರಿನಲ್ಲೇ ಮದುವೆಯಾಗಲಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ಸಾಕಷ್ಟು ಜನರು ಪ್ರಿಯಾಂಕಾ ಚಿಂಚೋಳಿಗೆ ಶುಭಾ ಹಾರೈಸುತ್ತಿದ್ದಾರೆ. ಪ್ರಿಯಾಂಕಾ ಹಾಗೂ ರಾಕೇಶ್‍ರದ್ದು ಪಕ್ಕಾ ಅರೇಂಜ್ ಮ್ಯಾರೇಜ್. ಪ್ರಿಯಾಂಕಾ ಪರಿಚಿತರ ಮೂಲಕ ರಾಕೇಶ್ ಪರಿಚಯ ಆಗಿದೆ. ಎರಡೂ ಮನೆಯವರೂ ಖುಷಿಯಿಂದ ಈ ಮದುವೆಗೆ ಒಪ್ಪಿದ್ದಾರೆ.

ಕಳೆದ ಫೆಬ್ರವರಿಯ ಪ್ರೇಮಿಗಳ ದಿನದಂದು ಬೆಳಗ್ಗೆ ಸಾಂಪ್ರದಾಯಿಕ ಸೀರೆ ಉಟ್ಟು ಪ್ರಿಯಾಂಕಾ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸಂಜೆ ಕೆಂಪು ಬಣ್ಣದ ಉಡುಗೆ ತೊಟ್ಟು ಔತಣಕೂಟದಲ್ಲಿ ಮಿಂಚಿದ್ದರು.

Leave a Reply

error: Content is protected !!
LATEST
KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ