NEWSನಮ್ಮರಾಜ್ಯಶಿಕ್ಷಣ-

ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನಕ್ಕೆ ಆಹ್ವಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ.ವಿ. ದೇವರಾಜ್ ತಿಳಿಸಿದ್ದಾರೆ.

2020- 21 ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದ ಒಕ್ಕಲಿಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಡಿಸೆಂಬರ್ ತಿಂಗಳಿನಲ್ಲಿ ಸನ್ಮಾನಿಸಲಾಗುವುದು.

ಹೀಗಾಗಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಪಿಯುಸಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪತ್ರದ ಜೆರಾಕ್ಸ್‌ ಪ್ರತಿಯನ್ನು ಅಂಚೆ ವಿಳಾಸ, ಮೊಬೈಲ್ ನಂಬರ್ ಹಾಗೂ ಪಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರದೊಂದಿಗೆ ಡಿಸೆಂಬರ್ 15ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

ಅಂಚೆ ಮೂಲಕ: ಸಿ.ವಿ. ದೇವರಾಜ್ ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್, ನಂ. 151 ಶ್ರೀವಾರಿ ಕಾಂಪ್ಲೆಕ್ಸ್, 5ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು -560 018.

ಹೆಚ್ಚಿನ ವಿವರಗಳಿಗೆ ಸಿ.ವಿ. ದೇವರಾಜ್ (ಮೊ: 9535 504 176), ಆರ್‌. ಸುರೇಶ್‌ (ಮೊ: 98863 3808) ಮತ್ತು ಬಿ. ಪ್ರದೀಪ್ (ಮೊ: 9880 2928 10) ಇವರನ್ನು ಸಂಪರ್ಕಿಸಬಹುದು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...