NEWSನಮ್ಮರಾಜ್ಯರಾಜಕೀಯ

18 ದಿನಗಳ ಬಳಿಕ ಖಾತೆ ಹೊಣೆ ಹೊತ್ತ ಸಚಿವ ಆನಂದ್​ ಸಿಂಗ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 18 ದಿನಗಳ ಬಳಿಕ ಆನಂದ್​ ಸಿಂಗ್​ ಸಿಎಂ ಅವರನ್ನು ಇಂದು ಭೇಟಿ ಮಾಡಿ ಸಮಾಧಾನಕರ ಚರ್ಚೆ ನಡೆಸಿದ್ದು, ಸಚಿವರಾಗಿ ಖಾತೆ ಜವಾಬ್ದಾರಿ ನಿರ್ವಹಿಸುವುದಾಗಿ ಆನಂದ್​ ಸಿಂಗ್​ ಹೇಳಿದ್ದಾರೆ.

ಆನಂದ್ ಸಿಂಗ್ ರಾಜೀನಾಮೆ ವಿಚಾರ ಸದ್ಯಕ್ಕೆ ಇತ್ಯರ್ಥವಾಗಿಲ್ಲ. ಈ ಎಲ್ಲದರ ನಡುವೆ ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದು ಅದಕ್ಕೂ ಮುನ್ನ ಆನಂದ್​ ಸಿಂಗ್​ ಸಿಎಂ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೂ ದಾರಿ ಮಾಡಿಕೊಟ್ಟಿದೆ.

ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಮುಖ್ಯಮಂತ್ರಿ ಭೇಟಿ ಬಳಿಕ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ಖಾತೆಯನ್ನು ನಿಭಾಯಿಸಿ ಎಂದು ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಿವಿಮಾತು ಹೇಳಿದ್ದಾರೆ. ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಇನ್ನು ಅವರ ಆದೇಶದಂತೆ ನಾನು ಇಂದು ಕೆಲಸಕ್ಕೆ ಬಂದಿದ್ದೇನೆ. ಆದಾಗ್ಯೂ, ಈ ಹಿಂದೆ ಸಲ್ಲಿಸಿದ್ದ ಮನವಿಯನ್ನೇ ಇಂದೂ ಸಲ್ಲಿಸಿರುವೆ. ನನ್ನ ಮನವಿಯನ್ನು ಪರಿಗಣಿಸುವುದಾಗಿ ಸಿಎಂ ತಿಳಿಸಿದ್ದು, ವರಿಷ್ಠರ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಇಂದು ನಾನು ನನ್ನ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆ ಎಂದರು.

ಇಂದು ಬೆಳಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಭೇಟಿಮಾಡಿ ಕೂಡ ನನ್ನ ಮನವಿಯನ್ನು ಅಧ್ಯಕ್ಷರಿಗೆ ತಿಳಿಸಿದ್ದೇನೆ. ಮೊದಲು ಖಾತೆಯನ್ನು ನಿಭಾಯಿಸಿ ಎಂದು ಹೇಳಿದ್ದಾರೆ. ಇನ್ನು, ನಾಳೆ ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ದೆಹಲಿ ಭೇಟಿ ವೇಳೆ ಎಲ್ಲವನ್ನು ಸರಿ ಮಾಡುವ ಭರವಸೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆಯ ವೇಳೆ ಸಚಿವ ಆರ್.ಅಶೋಕ್ ಮತ್ತು ಶಾಸಕ ರಾಜೂ ಗೌಡ ಸಹ ಉಪಸ್ಥಿತರಿದ್ದರು. ಹಾಗಾಗಿ ನನ್ನ ಬೇಡಿಕೆ ಈಡೇರುವ ಭರವಸೆ ಇದೆ ಎಂದು ತಿಳಿಸಿದರು.

ನಿರಂತರ ರಾಜಕೀಯ ಬೆಳವಣಿಗೆಗಳ ಬಳಿಕ ಸಚಿವ ಆನಂದ್ ಸಿಂಗ್ ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಸಚಿವ ಅಶೋಕ್ ಮತ್ತು ಶಾಸಕ ರಾಜುಗೌಡ ಇದ್ದರು.

ಸಚಿವ ಆನಂದ್ ಸಿಂಗ್ ಯಾವುದೇ ಬ್ಲ್ಯಾಕ್‌ಮೇಲ್ ಮಾಡಿಲ್ಲ. ತಮ್ಮ ಖಾತೆಯನ್ನು ವಹಿಸಿಕೊಂಡಿದ್ದಾರೆ. 18 ದಿನಗಳ ಕಾಲ ಖಾತೆಯನ್ನು ವಹಿಸಿಕೊಳ್ಳದ ಹಿನ್ನೆಲೆ ಮುಂದಿನ ದಿನಗಳಲ್ಲಿ 24 ಗಂಟೆಯೂ ಕೆಲಸ ಮಾಡ್ತಾರೆ ಎಂದು ವಿಕಾಸಸೌಧದಲ್ಲಿ ನಡೆದ ಸಭೆಯ ಬಳಿಕ ಬಿಜೆಪಿ ಶಾಸಕ ರಾಜುಗೌಡ ತಿಳಿಸಿದರು.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ