NEWSನಮ್ಮರಾಜ್ಯಶಿಕ್ಷಣ-

ರಾಜ್ಯಾದ್ಯಂತ ಆರಂಭಗೊಂಡ ಅಂಗನವಾಡಿ ಕೇಂದ್ರಗಳು

ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡ ಅಧಿಕಾರಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿವೆ. ಅದರಂತೆ ಬಾಗಲಕೋಟೆ ಜಿಲ್ಲೆಯ ತಾಲೂಕಿನ ಮುರನಾಳ ಆರ್.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿ.ಪಂ ಸಿಇಒ ಟಿ.ಭೂಬಾಲನ್ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ಬಳಿಕ ಅಂಗನವಾಡಿ ಶಾಲೆಗಳು ಸೋಮವಾರದಿಂದ ಪುನಃ ಆರಂಭಗೊಂಡಿದ್ದು, ಅಂಗನಾಡಿ ಸಿಬ್ಬಂದಿಗಳು ಶಾಲೆಗೆ ಆಗಮಿಸಿದ ಮಕ್ಕಳ ಮೇಲೆ ಪುಷ್ಪವೃಷ್ಠಿಗೈದು ಅದ್ದೂರಿಯಿಂದ ಬರಮಾಡಿಕೊಳ್ಳಲಾಯಿತು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಜಿ.ಪಂ ಸಿಇಒ ಹೂ ನೀಡುವುದರ ಜೊತೆಗೆ ಪೇನ್ಸಿಲ್ ಕೂಡಾ ವಿತರಿಸಿದರು. ಸಮವಸ್ತ್ರದೊಂದಿಗೆ ಮಕ್ಕಳ ಖುಷಿಯಿಂದ ಶಾಲೆಗೆ ಆಗಮಿಸಿದ್ದರು.

ನಂತರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಸಿಇಒ ಟಿ.ಭೂಬಾಲನ್ ಅವರು ಪ್ರಾರಂಭಿಕ ಹಂತದಲ್ಲಿ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯವಾಗಿದ್ದು, ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ.

ಇದರಿಂದ ಮಕ್ಕಳಲ್ಲಿ ಉತ್ತಮ ಬೆಳೆವಣಿಕೆ ಕಾಣಲು ಸಾಧ್ಯವಾಗುತ್ತದೆ. ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸರಕಾರ ಒದಗಿಸಿದ ಆಹಾರಧಾನ್ಯ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ತಿಳಿಸಿದರು.

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪಾಲನೆಯಾಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ನಿಗಾ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಶೇಂಗಾ ಉಂಡೆ ಮತ್ತು ಬೇಯಿಸಿದ ತತ್ತಿಯನ್ನು ನೀಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ, ಮಕ್ಕಳ ಮತ್ತು ತಾಯಂದಿರ ಮರಣ ಕಡಿಮೆಗೊಳಿಸುವುದು, ವಿವಿಧ ಇಲಾಖೆಯಗ ಸಹಕಾರದಿಂದ ಅಂಗನವಾಡಿ ಮಕ್ಕಳ ಸರ್ವತೋಮುಖ ಬೆಳೆವಣಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದೆಂದರು.

ಆರೋಗ್ಯ ತಪಾಸಣೆ, ಪೌಷ್ಠಿಕ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಯೋಜನೆಗಳು ಯಶಸ್ವಿಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪನಾಧಿಕಾರಿ ರಮೇಶ ಸೂಳಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಮುರನಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹಾಂತೇಶ ನಾಲತ್ವಾಡ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC