CrimeNEWSನಮ್ಮರಾಜ್ಯ

ರಾಜಧಾನಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ: ಮೂವರು ಮೃತ, ಇಬ್ಬರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಸಂಭವಿಸಿ ಘೋರ ದುರಂತ ನಡೆದಿದೆ.

ಚಾಮರಾಜಪೇಟೆಯ ರಾಯನ್ ಸರ್ಕಲ್​ನಲ್ಲಿ ಬಳಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆ ಹೇತ್ತೆಂದರೆ ಸಮೀಪದಲ್ಲಿದ್ದ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.

ಗಾಯಾಳುಗಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆge ದಾಖಲಿಸಲಾಗಿದೆ. ಪಂಕ್ಚರ್​ ಶಾಪ್​ ಮಾಲೀಕ ಅಸ್ಲಮ್ ಎಂಬುವವರು​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಂಕ್ಚರ್​ ಅಂಗಡಿಯಲ್ಲಿದ್ದ ಕಂಪ್ರೆಸರ್​ ಬ್ಲಾಸ್ಟ್ ಆಗಿರಬಹುದು ಎಂದು ಹೇಳಲಾಗುತ್ತಿದೆ. ನಂತರ ಗೋದಾಮಿನಲ್ಲಿದ್ದ ಪಟಾಕಿಗೆ ಬೆಂಕಿ ತಗುಲಿರಬಹುದು. ಸ್ಪೋಟಗೊಂಡ ವೇಳೆ ಅಲ್ಲಿನ ಸಿಬ್ಬಂದಿಯ ಸಹಾಯಕ್ಕೆ ಬಂದ ಜನ, ಪೊಲೀಸ್ ಬರುವಷ್ಟರಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದರು.

ಸುತ್ತಮುತ್ತಲಿನ 100 ಮೀಟರ್ ದೂರದವರೆಗೆ ಸ್ಫೋಟದ ಶಬ್ದ ಕೇಳಿಸಿದೆ. ಭಯದಿಂದ ಸ್ಥಳೀಯರು ಮನೆಯಿಂದ ಹೊರಬಂದಿದ್ದಾರೆ. ಭೂಕಂಪನದ ರೀತಿಯ ಅನುಭವ ಜನರಿಗಾಗಿದೆ. ಸ್ಫೋಟದ ತೀವ್ರತೆಗೆ 3 ಮೀಟರ್ ದೂರಕ್ಕೆ ದೇಹಗಳು ಹಾರಿವೆ. ಮೂವರ ದೇಹಗಳು ಗೋದಾಮಿನಿಂದ ಹೊರಗೆ ಹಾರಿಬಿದ್ದಿವೆ.

ಗೋದಾಮಿನಲ್ಲಿದ್ದ ಇಬ್ಬರು, ಪಂಕ್ಚರ್​ ಶಾಪ್​ನಲ್ಲಿದ್ದ ಒಬ್ಬ ಮೃತಪಟ್ಟಿದ್ದು, ಕಂಪ್ರೆಸರ್ ಅಥವಾ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿಯಿಲ್ಲ. ಮೇಲ್ನೋಟಕ್ಕೆ ಪಟಾಕಿ ಸ್ಫೋಟದ ರೀತಿಯಲ್ಲಿ ಕಾಣುತ್ತಿದೆ.

ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ತಜ್ಞರು ಬರುತ್ತಿದ್ದಾರೆ. ಟ್ರಾನ್ಸ್​ಪೋರ್ಟ್​​ ಗೋದಾಮಿನಲ್ಲಿ ಪಟಾಕಿ ಸಂಗ್ರಹದ ಮಾಹಿತಿಯಿದೆ. ಇದೇ ಗೋದಾಮಿನಲ್ಲಿ 15 ಬಾಕ್ಸ್​ ಪಟಾಕಿಯಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.

ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಾಂಬ್​ ಪತ್ತೆ ದಳ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಸುಟ್ಟು ಕರಕಲಾದ ಬೈಕ್​​ಗಳು: ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್​​ಗಳು ಸುಟ್ಟು ಕರಕಲಾಗಿವೆ ಎಂದು ಹೇಳಲಾಗುತ್ತಿದೆ. ಅಕ್ಕಪಕ್ಕದ ಮನೆಗಳಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜು ಪುಡಿಪುಡಿಯಾಗಿವೆ. ಸ್ಫೋಟದಿಂದ ಚಿಲ್ಲರೆ ಅಂಗಡಿ ಸಂಪೂರ್ಣ ಜಖಂ ಆಗಿದೆ. ಟೀ ಕುಡಿಯಲು ಬಂದಿದ್ದ ವ್ಯಕ್ತಿಯ ಮೃತದೇಹವೂ ಛಿದ್ರ ಛಿದ್ರವಾಗಿದೆ.

ಘೋರ ಅನಾಹುತ ನೋಡಿದ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ರಾಯನ್​ವೃತ್ತದಲ್ಲಿ ದಿಢೀರ್​ ಸ್ಫೋಟದ ಶಬ್ದವಾಯಿತು. ಮಧ್ಯಾಹ್ನ 12.10ರ ಸುಮಾರಿಗೆ ದುರಂತ ಸಂಭವಿಸಿದೆ.

ನಾನು ಸ್ಥಳಕ್ಕೆ ಹೋದಾಗ ದಟ್ಟವಾದ ಹೊಗೆ ಆವರಿಸಿತ್ತು. ಪಂಕ್ಚರ್​ ಅಂಗಡಿಯಲ್ಲಿದ್ದ ಕಂಪ್ರೆಸರ್​ ಸ್ಫೋಟದ ಶಂಕೆ ವ್ಯಕ್ತವಾಗಿದೆ. ಬಾಂಬ್ ಸ್ಫೋಟವಾಗಿದೆ ಎಂದು ಜನರು ಓಡುತ್ತಿದ್ದರು ಎಂದು ತಿಳಿಸಿದರು.

ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದೆ. ಸದ್ಯ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗೋಡೌನ್ ತುಂಬಾ ಹೆಚ್ಚು ಪಟಾಕಿ ಇರುವ ಹಿನ್ನೆಲೆಯಲ್ಲಿ ಮತ್ತೆ ಸ್ಪೋಟವಾಗುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಫೈರ್ ಇಂಜಿನ್ ಮೂಲಕ ನೀರು ಹಾಕಲಾಗುತ್ತಿದೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ