NEWSನಮ್ಮರಾಜ್ಯರಾಜಕೀಯ

ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಫ್ಘಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿ ಇದ್ದು, ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಸಲುವಾಗಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಲು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ನಾಗರಿಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಆಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ.

ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಸಿದ್ಧವಾಗಿದ್ದಾರೆ.

ಬೆಂಗಳೂರಿನ ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಉಮೇಶ್ ಕುಮಾರ್ ಭಾರತ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಫ್ಘಾನ್​ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಮಾನಸಿಕ ಒತ್ತಡದಲ್ಲಿದ್ದಾರೆ. ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಕೆಲಸ ಮಾಡಬೇಕು. ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಇಂದು ಹೇಳಿಕೆ ನೀಡಿದ್ದರು.

ಅದರ ಬೆನ್ನಲ್ಲೇ ಇಂದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಿಲುಕಿದ್ದು ಅವರ ರಕ್ಷಣೆಗೆ ಸರ್ಕಾರ ಮುಂದಾಗಿದೆ.

Leave a Reply

error: Content is protected !!
LATEST
LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ