CrimeNEWSನಮ್ಮರಾಜ್ಯ

ಮುಷ್ಕರದಲ್ಲಿ ಭಾಗಿ ಆರೋಪ: ಸಾರಿಗೆ ನೌಕರರಿಗೆ ಜಾಮೀನು ಮಂಜೂರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವಿರುದ್ಧ ಮುಷ್ಕರದ ವೇಳೆ ನಗರದ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಸಂಬಂಧ ಶನಿವಾರ ನಗರದ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ 57ನೇ ಹಾಲ್‌ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಮೂವರಿಗೆ ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮೂರು ಮಂದಿ ಸಾರಿಗೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಸೋಮವಾರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯದಲ್ಲಿ ಕೈಗೆತ್ತಿಕೊಳ್ಳಲಾಯಿತು. ಈ ವೇಳೆ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದರು.

ಆರೋಪಿಗಳ ಪರ ವಕಾಲತು ವಹಿಸಿದ ಸುಪ್ರೀಂ ಕೋರ್ಟ್‌ ಹಾಗೂ ಕರ್ನಾಟಕ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು 3 ಮಂದಿಯೂ ಬಿಎಂಟಿಸಿಯ ನೌಕರರಾಗಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇನ್ನು ಈ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದಿಲ್ಲ. ಆದ್ದರಿಂದ ಕೊತ್ತನೂರು ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಗಳು ದಾಖಲಿಸಿರುವ ದೂರು ಸುಳ್ಳಿನಿಂದ ಕೂಡಿರುತ್ತದೆ. ಹೀಗಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಎಲ್ಲ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಬೇಕು ಎಂದು ವಾದ ಮಂಡಿಸಿದರು.

ಈ ಆರೋಪಿಗಳಿಗೆ ಜಾಮೀನು ದೊರೆತಲ್ಲಿ ಅವರು ಮುಂದೆ ಕರ್ತವ್ಯ ಮಾಡಲು ತುಂಬ ಅನುಕೂಲಕರವಾಗುತ್ತದೆ ಎಂದು ನ್ಯಾಯಾಧೀಶರ ಮುಂದೆ ವಕೀಲರು ಮನವಿ ಮಾಡಿಕೊಂಡಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ನೌಕರರಿಂದ ಶುಲ್ಕ ಪಡೆಯದೆ ವಕಾಲತು ವಹಿಸಿರುವ ವಕೀಲ ಎಚ್‌.ಬಿ.ಶಿವರಾಜು: ಬೆಂಗಳೂರಿನ ವಿವಿಧ ನ್ಯಾಯಾಲಯಗಳು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸಾರಿಗೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಎಲ್ಲಾ ಆರೋಪಿಗಳಿಗೆ ವಕೀಲ ಎಚ್‌.ಬಿ.ಶಿವರಾಜು ಅವರು ಜಾಮೀನು ಮಂಜೂರು ಮಾಡಿಸಿದ್ದಾರೆ.

ಈ ಪ್ರಕರಣಗಳ ಸಂಬಂಧ ವಕೀಲರು ನೌಕರರಿಂದ ಯಾವುದೇ ಶುಲ್ಕ ಪಡೆಯದೆ ಮಾನವೀಯತೆ ಮೆರೆದಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...