NEWSನಮ್ಮರಾಜ್ಯರಾಜಕೀಯ

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದ್ದು, ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ನಾಳೆ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದು. ಇವರ ಜತೆಗೆ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ದಲಿತ ಸಮುದಾಯದ ಗೋವಿಂದ ಕಾರಜೋಳ, ಎಸ್‌ಟಿ ಸಮುದಾಯದ ಬಿ.ಶ್ರೀರಾಮುಲು ಮತ್ತು ಒಕ್ಕಲಿಗೆ ಸಮುದಾಯದ ಆರ್‌. ಅಶೋಕ್‌ ಅವರನ್ನು ಆಯ್ಕೆ ಮಾಡಲಾಗಿದೆ.

ನಾಳೆ ಸಿಎಂ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ.

ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.100 ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಯಡಿಯೂರಪ್ಪ ಅವರ ಸಂಪುಟದಲ್ಲಿ ಮುಖ್ಯಮಂತ್ರಿಗಳ ಬಳಿಕ ಎರಡನೇ ಪ್ರಬಲ ಖಾತೆಯಾದ ಗೃಹ ಖಾತೆಯನ್ನೂ ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ತಮ್ಮ ರಾಜಕೀಯವನ್ನು ಪ್ರಾರಂಭಿಸಿದ್ದು ಜನತಾದಳದಿಂದ.

1998 ಹಾಗೂ 2004 ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. 2008 ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಗೊಂಡಿದ್ದರು. ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ಈವರೆಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವಿಪಕ್ಷದ ಉಪನಾಯಕ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.

ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್.ಆರ್.ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ.

ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜು.28 ರಂದು ಮಧ್ಯಾಹ್ನ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

“ನನ್ನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ, ಯಡಿಯೂರಪ್ಪ ಅವರಿಗೆ ಧನ್ಯವಾದ, ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ನನಗೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ಎಲ್ಲರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ ಹಣಕಾಸು ಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇನೆ. ನನ್ನ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಯಡಿಯೂರಪ್ಪ ಅವರ ನಿರೀಕ್ಷೆ ಈಡೇರಿಸುವೆ”
l ಬಸವರಾಜ ಬೊಮ್ಮಾಯಿ ನಿಯೋಜಿತ ಸಿಎಂ

“ರಾಜ್ಯದ್ಲಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ಬೊಮ್ಮಾಯಿ ಸಚಿವರಾಗಿ ಕೆಲಸ ಮಾಡಿದ್ದಾರೆ, ಅವರು ಸಿಎಂ ಆಗುತ್ತಿರುವುದು ನಮ್ಮ ಸೌಭಾಗ್ಯ”
l ಬಿ.ಎಸ್ .ಯಡಿಯೂರಪ್ಪ ನಿರ್ಗಮಿತ ಸಿಎಂ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...