NEWSನಮ್ಮರಾಜ್ಯಶಿಕ್ಷಣ-

ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ: ಸ್ನೇಹಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಜುಲೈ 15ರಿಂದ ಆನ್​ಲೈನ್​ ಮೂಲಕ ತರಗತಿಗಳು ಶುರುಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಮೊದಲ ಹಂತದಲ್ಲಿ ಆನ್​ಲೈನ್​ ಮೂಲಕ ತರಗತಿಗಳನ್ನು ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ತರಗತಿಗಳಲ್ಲೇ ಕುಳಿತು ಪಾಠ (ಭೌತಿಕ ತರಗತಿಗಳು) ಕೇಳುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಳೆದ ಏ.27ರಿಂದ ಲಾಕ್​ಡೌನ್​ ವಿಧಿಸಿತ್ತು. ಈ ವೇಳೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಘೋಷಿಸಿತ್ತು. ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ನಡೆಯಬೇಕಿದ್ದ ಪಿಯು ಪರೀಕ್ಷೆಯನ್ನು ರದ್ಧುಗೊಳಿಸಿದೆ. ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳನ್ನು ಅವಲೋಕಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂಕವನ್ನು ನೀಡಲು ನಿರ್ಧರಿಸಿದ್ದು, ಈಗ ಅದಕ್ಕೂ ಕೋರ್ಟ್‌ನಿಂದ ತಡೆ ನೀಡಲಾಗಿದೆ.

ಹಂತ ಹಂತವಾಗಿ ಶೈಕ್ಷಣಿಕ ವರ್ಷಾರಂಭಕ್ಕೆ ಮುಂದಾದ ಶಿಕ್ಷಣ ಇಲಾಖೆ, ಮೊದಲ ಹಂತದಲ್ಲಿ ಆನ್​ಲೈನ್​ ಮೂಲಕ ತರಗತಿ ಶುರುಮಾಡಲು ನಿರ್ಧರಿಸಿದೆ. ಪ್ರಥಮ ಪಿಯು ಪಾಸಾದ ವಿದ್ಯಾರ್ಥಿಗಳಿಗೆ ಮೊದಲು ಆನ್​ಲೈನ್​ ಮೂಲಕ ಶಿಕ್ಷಣ ನೀಡಲಾಗುವುದು.

ನಂತರ ಕೊರೊನಾ ಸ್ಥಿತಿಗತಿ ನೋಡೊಕೊಂಡು ಭೌತಿಕ ತರಗತಿಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುವುದು. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಜುಲೈ ಕೊನೆಯ ವಾರದಿಂದಲೇ ಭೌತಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್. ಸ್ನೇಹಲ್ ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?