NEWSನಮ್ಮರಾಜ್ಯರಾಜಕೀಯ

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ : ಸತ್ಯ ಬಿಚ್ಚಿಟ್ಟು ಗುದ್ದುಕೊಟ್ಟ ಜೆಡಿಎಸ್

ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ಬಿಜೆಪಿಗರು ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ ಎಂದ ಜೆಡಿಎಸ್‌

ಬೆಂಗಳೂರು: ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ವಾಗ್ದಾಳಿ ನಡೆಸಿದೆ.

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನುಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ.

1.ಯಡಿಯೂರಪ್ಪ ಕುಟುಂಬ:
ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2.ಶೆಟ್ಟರ್ ಕುಟುಂಬ:
ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3.ಅಣ್ಣಾ ಸಾಹೇಬ್ ಕುಟುಂಬ:
ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4.ಬಳ್ಳಾರಿ ರೆಡ್ಡಿ ಕುಟುಂಬ:
ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5.ಜಾರಕಿಹೊಳಿ ಕುಟುಂಬ:
ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6.ಲಿಂಬಾವಳಿ ಕುಟುಂಬ:
ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?

7.ಉದಾಸಿ ಕುಟುಂಬ:
ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ?

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ ಎಂದು ಕಿಡಿಕಾರಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...