NEWSನಮ್ಮರಾಜ್ಯರಾಜಕೀಯ

ನಿರ್ಭಯಾ ನಿಧಿ ಉಪಯೋಗಿಸಿಕೊಳ್ಳದೆ ಕ್ರೈಂ ರೇಟ್‌ ಹೆಚ್ಚಳಕ್ಕೆ ಕಾರಣವಾದ ಬಿಜೆಪಿ ಸರ್ಕಾರ: ಆಮ್‌ ಆದ್ಮಿ ಪಾರ್ಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಯರಿಗೆ ಸುರಕ್ಷಿತ ನಗರವನ್ನಾಗಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ರಾಜ್ಯದಲ್ಲಿ ಅಳವಡಿಸಲು ಅನಗತ್ಯ ವಿಳಂಬ ಧೋರಣೆಯನ್ನು ಬಿಜೆಪಿ ಸರಕಾರ ತೋರಿಸುತ್ತಿದೆ.

ಈ ಮೂಲಕ ನಗರದ ಕ್ರೈಂ ರೇಟ್‌ ಹೆಚ್ಚಳವಾಗಲು ಕಾರಣವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆರೋಪಿಸಿದ್ದಾರೆ.

ಗುರುವಾರ (ಅ.7) ಪ್ರೆಸ್‌ಕ್ಲಬ್‌ ನಲ್ಲಿ ಆಯೋಜಿಸಿದ್ದ ಸುದ್ದಿಕಾಗೋಷ್ಠಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದಂತಹ ಘನಘೋರ ಅತ್ಯಾಚಾರ ಪ್ರಕರಣದ ನಂತರ ದೆಹಲಿ ನಗರ ಪೊಲೀಸ್‌ ಈ ಯೋಜನೆಯನ್ನು ರೂಪಿಸಿತ್ತು.

2018 ರಲ್ಲಿ ಈ ಯೋಜನೆಗೆ ಕೇಂದ್ರ ಸರಕಾರದ ಗೃಹ ಇಲಾಖೆ ಅನುಮತಿ ನೀಡಿತ್ತು. ಈ ಯೋಜನೆಯ ಅಡಿಯಲ್ಲಿ ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈ, ಹೈದರಾಬಾದ್‌, ಲಕ್ನೋ, ಅಹಮದಾಬಾದ್‌ ಮತ್ತು ಕೋಲ್ಕತ್ತಾ ನಗರಗಳಿಗೆ ಹಣಕಾಸಿನ ನೆರವನ್ನು ಒದಗಿಸಲಾಗಿತ್ತು. ಬೆಂಗಳೂರು ನಗರಕ್ಕೆ ಮೊದಲ ಹಂತವಾಗಿ 667 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿತ್ತು.

ಈ ಹಣವನ್ನು ಬಳಸಿಕೊಂಡು ನಗರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ, 16 ಸಾವಿರ ಕ್ಯಾಮೆರಾಗಳನ್ನು ಅಳವಡಿಸುವುದು ಪ್ರಮುಖ ಗುರಿಯಾಗಿತ್ತು. ಅಲ್ಲದೆ, 50 “ಸೇಫ್ಟೀ ಐಲ್ಯಾಂಡ್‌” ಗಳನ್ನು ರೂಪಿಸುವುದು ಈ ಯೋಜನೆಯಲ್ಲಿತ್ತು.

ಈ ಯೋಜನೆ ಅನುಷ್ಠಾನ ಮಾಡವಲ್ಲಿ ರಾಜ್ಯ ಸರಕಾರ ವಿನಾಕಾರಣ ವಿಳಂಬ ಮಾಡಿದೆ. ಕೇಂದ್ರ ಸರಕಾರ ಯೋಜನೆಗೆ ಅನುಮತಿ ನೀಡಿದ ನಂತರ ರಾಜ್ಯ ಸರಕಾರ ಮತ್ತೊಂದು ವರ್ಷ ಸಮಯ ತಗೆದುಕೊಂಡಿತು. ಆ ನಂತರ, ಈ ವರೆಗೂ ನಾಲ್ಕು ಟೆಂಡರ್‌ ಗಳನ್ನು ಕರೆದಿರುವ ರಾಜ್ಯ ಸರಕಾರ ಕೊನೆಗೂ ಯೋಜನೆ ಅನುಷ್ಠಾನಕ್ಕೆ ಕಂಪನಿಯೊಂದನ್ನು ಅಂತಿಮಗೊಳಿಸುವ ಹಂತಕ್ಕೆ ತಲುಪಿದೆ.

ವಿಶ್ವದಲ್ಲೇ ಅತಿ ಹೆಚ್ಚು ಸರ್ವೇಲೆನ್ಸ್‌ ಕ್ಯಾಮೆರಾ ಹೊಂದಿರುವ ನಗರ ದೆಹಲಿ: ಕೇಂದ್ರ ಸರಕಾರದಿಂದ ಅನುದಾನ ಪಡೆದುಕೊಳ್ಳುವ ಮೂಲಕ ದೆಹಲಿ ಯಲ್ಲಿ ಪ್ರತಿ ಒಂದು ಚದರ ಮೈಲಿಗೆ 1826.6 ಕ್ಯಾಮೆರಾಗಳನ್ನು ದೆಹಲಿಯಲ್ಲಿ ಅಳವಡಿಸಲಾಗಿದೆ.

ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಸರ್ವೇಲೆನ್ಸ್‌ ಕ್ಯಾಮೆರಾಗಳನ್ನು ಹೊಂದಿರುವ ನಗರ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಲಂಡನ್‌ ನಗರ 2 ನೇ ಸ್ಥಾನದಲ್ಲಿದ್ದು, 3 ಸ್ಥಾನವನ್ನು ಚೈನ್ನೈ ಪಡೆದುಕೊಂಡಿದೆ.

ಬೆಂಗಳೂರು ನಗರದಲ್ಲಿ ಈ ಯೋಜನೆ ಪ್ರಾರಂಭಕ್ಕೆ ಗ್ರಹಣ ಹಿಡಿಸಿರುವ ಸರಕಾರ: ಇಂತಹ ಮಹತ್ವಪೂರ್ಣ ಯೋಜನೆಯ ಅನುಷ್ಠಾನಕ್ಕೆ ಜೆಸಿಬಿ ಸರಕಾರಗಳು ಗ್ರಹಣ ಹಿಡಿಸಿವೆ. ಮಹಿಳೆಯರ ವಿರುದ್ದ ಅಫರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಮನಸ್ಥಿತಿಯನ್ನು ತೋರಿಸದೇ ಇರುವುದು ಎಷ್ಟರ ಮಟ್ಟಿಗೆ ಸರಿ?

ನಗರದಲ್ಲಿ ಕ್ರೈಂ ರೇಟ್‌ ಹೆಚ್ಚಲು ಬಿಜೆಪಿ ಸರಕಾರ ಕಾರಣ: ನಿರ್ಭಯಾ ನಿಧಿಯನ್ನು ಬಳಸಿಕೊಳ್ಳದೆ ಇರುವ ಮೂಲಕ ನಗರದಲ್ಲಿ ಅಫರಾಧ ಅದರಲ್ಲೂ ಮಹಿಳೆಯರ ಮೇಲಿನ ಅಫರಾಧ ಚಟುವಟಿಕೆಗಳು ಹೆಚ್ಚಾಗಿವೆ. ಯೋಜನೆಯನ್ನು ವಿನಾಕಾರಣ ವಿಳಂಬ ಮಾಡಿದ ಬಿಜೆಪಿ ಸರಕಾರ ಇದಕ್ಕೆ ಮೂಲ ಕಾರಣ.

ರಾಜ್ಯ ಸರಕಾರ ಈ ಯೋಜನೆಯ ಅಳವಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನಗರವನ್ನು ಮಹಿಳೆಯರಿಗಾರಿ ಸುರಕ್ಷಿತವಾಗಿಸಬೇಕು ಎಂದು ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಾ ಸ್ವಾಮಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಯೋಜಕ ವಿಜಯ್‌ ಶಾಸ್ತ್ರಿಮಠ್‌ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ