NEWSನಮ್ಮರಾಜ್ಯರಾಜಕೀಯ

ಪಾಪದ ಹಣದಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜಕಾರಣ ಮಾಡುತ್ತಿದೆ: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರಕ್ಕೆ ಬಂದು ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಪಂಚಾಯಿತಿ ಮೆಂಬರ್ ವರೆಗೂ ಖರೀದಿ ಮಾಡುವ ನಡವಳಿಕೆ ಇಟ್ಟುಕೊಂಡಿರುವ ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಭಾನುವಾರ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ಕೆ. ಪಾಳ್ಯದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಹಾಗೂ ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ನೇತೃತ್ವದಲ್ಲಿ 40 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ನಾಯಕರನ್ನು ಕೊಂಡುಕೊಳ್ಳುವ ಕೆಲಸ ವಿಧಾನಸಭೆಯಲ್ಲಿ ಶುರುವಾಗಿ ಇದೀಗ ಸ್ಥಳೀಯ ಮಟ್ಟಕ್ಕೂ ವಿಸ್ತರಣೆ ಮಾಡಲಾಗಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಇಂತಹ ನಡವಳಿಕೆಯನ್ನು ಬಿಡಬೇಕು ಎಂದು ಜಾಡಿಸಿದರು.

ಬಿಜೆಪಿ ಸರ್ಕಾರ ಪಾಪದ ಹಣವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಸೂಸೈಡ್ ಮಾಡಿಕೊಳ್ಳೋಕೆ ಯಾಕೆ ಹೋದರು ಎನ್ನುವುದು ತಿಳಿದಿಲ್ಲ. ಸಮ್ಮಿಶ್ರ ಸರ್ಕಾರ ಬೀಳಿಸುವಲ್ಲಿ ಈತನೇ ಕಿಂಗ್ ಪಿನ್ ಆಗಿ ಕೆಲಸ ಮಾಡಿದ್ದು. ಈಗ ಮುಂದಿನ ಚುನಾವಣೆಯಲ್ಲಿ ಅರಸಿಕೇರೆಯಲ್ಲಿ ಸ್ಪರ್ಧೆ ಮಾಡಲು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಂಪಾದನೆ ಆದ ಕಳ್ಳಹಣದಲ್ಲಿ ಜನಪ್ರತಿನಿಧಿಗಳನ್ನು ಕೊಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಫುಡ್ ಕಿಟ್‍ಗಳ ಮೇಲೆ ಬಿಜೆಪಿಯವರು ತಮ್ಮ ಫೋಟೋ ಹಾಕಿಸಿ ಪ್ರಚಾರ ಪಡೆಯುತ್ತಿದ್ದು, ಮಹಾದಾನಿಗಳು ಎಂದು ಪ್ರಚಾರ ಪಡೆದು ಅದರಲ್ಲೂ ಸಹ ಕೋಟಿ ಕೋಟಿ ರೂ. ಲೂಟಿ ಮಾಡುತ್ತಿದ್ದಾರೆ ಎಂದು ಹೇಳಿದರು.

ತುರ್ತು ಪರಿಸ್ಥಿತಿ ಘೋಷಣೆ ಮಾಡದೆ ಇದ್ದರು ಸಹ ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬದ್ದವಾಗಿ ಸಂವಿಧಾನದ ಪ್ರಕಾರ ಯಾವುದೇ ಸಂಸ್ಥೆಗಳು ಕೆಲಸ ಮಾಡುತ್ತಿಲ್ಲ. ಕೇವಲ ಸರ್ಕಾರದ ಆದೇಶದ ಮೇಲೆ ಮಾಡುತ್ತಿದ್ದು, ಜನಸಾಮಾನ್ಯರು ಜಾಗೃತರಾಗಬೇಕು ಇಲ್ಲದಿದ್ದರೆ, ಮುಂದಿನ ದಿನಗಳು ಇನ್ನಷ್ಟು ದುಸ್ತರವಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಇಂಥ ನೀಚ ರಾಜಕಾರಣವನ್ನು ನಾನು ನೋಡಿಯೇ ಇಲ್ಲ. ಕೆಲವೊಮ್ಮೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿಯೇ ಇಂದಿನ ಬಿಜೆಪಿ ಸರ್ಕಾರ ನಡೆದುಕೊಳ್ಳುವ ರೀತಿ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...