NEWSನಮ್ಮರಾಜ್ಯರಾಜಕೀಯ

ಬಿಜೆಪಿ ನಾಯಕರಿಗೆ ಪತ್ರಕರ್ತರನ್ನು ಕಂಡರೆ ಹೆದರಿಕೆ: ಜಗದೀಶ್‌ ಸದಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸೌಧದ ಕಾರಿಡಾರ್‌ಗಳಿಗೆ ಪತ್ರಕರ್ತರಿಗೆ ಪ್ರವೇಶವನ್ನು ನಿಷೇಧಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಆಮ್‌ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ, ಮಾಧ್ಯಮಗಳಿಗೆ ತಿಳಿದರೆ ತೊಂದರೆಯಾಗುವಂತಹ ಯಾವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಶ್ನಿಸಿದರು.

ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯಲಾಗುತ್ತದೆ. ಆಡಳಿತದಲ್ಲಿ ಪಾರದರ್ಶಕತೆ ತರುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿವೆ. ಸರ್ಕಾರದ ಲೋಪದೋಷಗಳು, ಜನಪ್ರತಿನಿಧಿಗಳು ಮಾಡುವ ಸರಿತಪ್ಪುಗಳು ಜನರಿಗೆ ತಿಳಿಯುವುದೇ ಮಾಧ್ಯಮಗಳಿಂದ. ಹೀಗಿರುವಾಗ ರಾಜ್ಯ ಸರ್ಕಾರವು ವಿಧಾನಸೌಧದಲ್ಲೇ ಪತ್ರಕರ್ತರ ಹಕ್ಕುಗಳನ್ನು ಮೊಟಕುಗೊಳಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು.

ಕೆಂಗಲ್‌ ಹನುಮಂತಯ್ಯನವರು ಒಳ್ಳೆಯ ಉದ್ದೇಶದಿಂದ ವಿಧಾನಸೌಧವನ್ನು ಕಟ್ಟಿಸಿದ್ದಾರೆ. ಆದರೆ ಆ ಪವಿತ್ರ ಕಟ್ಟಡದ ಆವರಣವು ಇಂದು ಕಮಿಷನ್‌ ದಂಧೆ, ವರ್ಗಾವಣೆ ದಂಧೆಗೆ ಬಳಕೆಯಾಗುತ್ತಿರುವುದು ದುರಂತ.

ಮುಖ್ಯಮಂತ್ರಿ ಹಾಗೂ ಸಚಿವರು ಬಹುತೇಕ ಅಕ್ರಮಗಳ ಡೀಲ್‌ಗಳನ್ನು ವಿಧಾನಸೌಧದಲ್ಲಿ ಕುದುರಿಸುತ್ತಿದ್ದಾರೆ. ಅಕ್ರಮಕ್ಕೆ ಸೇತುವೆಯಾಗಿರುವ ಬ್ರೋಕರ್‌ಗಳು ವಿಧಾನಸೌಧದ ತುಂಬ ತುಂಬಿಕೊಂಡಿದ್ದಾರೆ. ಜೊತೆಗೆ, ಕೆಲವು ಸಚಿವರು ಅಧಿಕಾರ ಉಳಿಸಿಕೊಳ್ಳಲು ಹಾಗೂ ಕೆಲವು ಶಾಸಕರು ಸಚಿವ ಸ್ಥಾನ ಪಡೆಯಲು ಹಣದ ಹೊಳೆ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಇವೆಲ್ಲ ಕ್ಯಾಮೆರಾಗಳಲ್ಲಿ ಸೆರೆಯಾಗಬಾರದು, ಮಾಧ್ಯಮಗಳ ಮೂಲಕ ಜನರಿಗೆ ತಿಳಿಯಬಾರದು ಎಂಬ ಕಾರಣಕ್ಕೆ ಪತ್ರಕರ್ತರಿಗೆ ಪ್ರವೇಶ ನಿಷೇಧಿಸಿರಬಹುದು. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿರುವುದಕ್ಕೆ ಇದೊಂದು ನಿದರ್ಶನ ಎಂದು ಜಗದೀಶ್‌ ಸದಂ ಕಿಡಿಕಾರಿದರು.

ರಾಜ್ಯದ ಬಿಜೆಪಿ ನಾಯಕರಿಗೆ ಪತ್ರಕರ್ತರನ್ನು ಕಂಡರೆ ಹೆದರಿಕೆಯಾಗುವುದು ಸಹಜ. ಏಕೆಂದರೆ ವಿಧಾನಸಭೆಯಲ್ಲಿ ಮೂವರು ಶಾಸಕರು ನೀಲಿಚಿತ್ರ ವೀಕ್ಷಿಸುತ್ತಿರುವುದನ್ನು ಪತ್ರಕರ್ತರು ಈ ಹಿಂದೆ ಬಯಲಿಗೆಳೆದೆದ್ದಿದ್ದರು.

ವಿಧಾನಸೌಧದಲ್ಲಿ ನಡೆಯುವ ಭ್ರಷ್ಟಾಚಾರಗಳನ್ನು ಮಾಧ್ಯಮಗಳು ತೆರೆದಿಡುತ್ತಲೇ ಇವೆ. ತಮ್ಮ ಹುಳುಕುಗಳನ್ನು ಮುಚ್ಚಿಟ್ಟಕೊಳ್ಳಲು ಪತ್ರಕರ್ತರಿಗೆ ನಿರ್ಬಂಧ ವಿಧಿಸಿರುವ ತಮ್ಮ ಆದೇಶವನ್ನು ಮುಖ್ಯಮಂತ್ರಿಗಳು ಕೂಡಲೇ ಹಿಂಪಡೆಯಬೇಕು. ವಿಧಾನಸೌಧದ ಕಾರಿಡಾರ್‌ಗಳಲ್ಲಿ ವರದಿಗಾರಿಕೆ ಮಾಡಲು ಪತ್ರಕರ್ತರಿಗೆ ಅವಕಾಶ ನೀಡಬೇಕು. ಈ ಮೂಲಕ ಪತ್ರಕರ್ತರಿಗಿರುವ ಹಕ್ಕುಗಳನ್ನು ಗೌರವಿಸಬೇಕು ಎಂದು ಜಗದೀಶ್‌ ಸದಂ ಆಗ್ರಹಿಸಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ