NEWSನಮ್ಮರಾಜ್ಯ

ಲಂಚಾರೋಪ: ಕೆಕೆಆರ್‌ಟಿಸಿ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಕರ್ತವ್ಯದಿಂದ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಈ ಕೂಡಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳ್ಳಬೇಕು ಎಂದು ಶನಿವಾರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ನಿಗಮದ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಲಂಚವಿಲ್ಲದೆ ಯಾವುದೇ ಕೆಲಸ ಮಾಡಿಕೊಡುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅವರು ನೌಕರರಿಂದ ಲಂಚ ಪಡೆದಿದ್ದಾರೆ ಎಂಬ ಆಡಿಯೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು, ಈ ಸಂಬಂಧ ವಿಜಯಪಥ ವೆಬ್‌ ನ್ಯೂಸ್‌ ಕೂಡ ಶನಿವಾರ ವರದಿ ಮಾಡಿತ್ತು.

ವಿಜಯಪಥದಲ್ಲಿ ವರದಿ ಬರುತ್ತಿದ್ದಂತೆ ನಾರಾಯಣಪ್ಪ ಕುರುಬರ ಅವರನ್ನು ಆಡಳಿತಾತ್ಮಕ ಕಾರಣಗಳ ಮೇರೆಗೆ ನಿಗಮದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸೂಕ್ತ ಅಧಿಕಾರಿಗಳ ಆದೇಶದ ಮೇರೆಗೆ ಹುದ್ದೆ ನಿರೀಕ್ಷಣೆಯಲ್ಲಿರಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ನಾರಾಯಣಪ್ಪ ಅವರು ಶನಿವಾರ ಮಧ್ಯಾಹ್ನವೇ ವಿಭಾಗಿಯ ಸಂಚಾರ ಅಧಿಕಾರಿಗಳಿಗೆ ತಮ್ಮ ಕಾರ್ಯಭಾರವನ್ನು ವಹಿಸಿ ಬಿಡುಗಡೆಗೊಳ್ಳಲು ಹಾಗೂ ಮುಂದಿನ ಆದೇಶಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮುಂದೆ ಹಾಜರಾಗಲು ಆದೇಶಿಸಲಾಗಿದೆ.

ಕೆಕೆಆರ್‌ಟಿಸಿ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಲಂಚಾವತಾರ : ಸಾಮಾಜಿಕ ಜಾಲತಾಣದಲ್ಲಿ ಭಾರಿ ಸೌಂಡ್‌

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ