NEWSನಮ್ಮರಾಜ್ಯರಾಜಕೀಯ

ಸಿಎಂ ಪದವಿಗೆ ಬಿಎಸ್‌ವೈ ರಾಜೀನಾಮೆ: ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರ ಸೂಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ಅಲ್ಲಿ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನು ಸಿಎಂ ರಾಜೀನಾಮೆಯಿಂದ ಇಡೀ ಸಚಿವ ಸಂಪುಟ ವಿಸರ್ಜನೆಯಾದಂತ್ತಾಗಿದ್ದು, ಎಲ್ಲ ಸಚಿವರೂ ಮಾಜಿಗಳಾಗಿದ್ದಾರೆ. ಹೀಗಾಗಿ ಮುಂದಿನ ಸಿಎಂ ಆಯ್ಕೆವರೆಗೆ ಯಾವುದೇ ಸಚಿವರಿಗೆ ಪವರ್‌ ಇರುವುದಿಲ್ಲ.

ಸಿಎಂ ರಾಜೀನಾಮೆ ಸಲಲ್ಲಿಸುವ ವೇಳೆ ರಾಜಭವನ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಯಡಿಯೂರಪ್ಪ ಅಭಿಮಾನಿಗಳಿಗೆ ಇಂದು ನಿಜಕ್ಕೂ ಅತ್ಯಂತ ದುಃಖದ ದಿನವೇ ಎನ್ನಬಹುದು. 4 ಬಾರಿ ಕರ್ನಾಟಕದ ಸಿಎಂ ಆದರೂ ಒಮ್ಮೆ ಕೂಡ ಅವರು ಅಧಿಕಾರಾವಧಿ ಪೂರ್ಣಗೊಳಿಸಲಿಲ್ಲ. ಹೀಗಾಗಿ ಅವರ ಅನುಯಾಯಿಗಳು, ಅಭಿಮಾನಿಗಳು ಅತ್ಯಂತ ಭಾವುಕರಾಗಿದ್ದಾರೆ. ಜತೆಗೆ ಬಿಎಸ್‌ವೈ ಅವರಿಗೆ ಪೂರ್ಣ ಅವಧಿ ಅಧಿಕಾರ ನಡೆಸಲು ಪಕ್ಷದ ಒಳಗೆಯೇ ಮಸಲತ್ತು ನಡೆಸಿ ಅಧಿಕಾರದಿಂದ ಕಳಗಿಳಿಸುವ ಹುನ್ನಾರವೇ ಹೆಚ್ಚಾಗಿ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.

ಜುಲೈ 26ರಂದೇ ರಾಜೀನಾಮೆ
ಸರಿಯಾಗಿ ಎರಡು ವರ್ಷಗಳ ಹಿಂದೆ 2019ರ ಜುಲೈ 26ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದರು. ಆಪರೇಷನ್ ಕಮಲ ಮೂಲಕ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಬೀಳಿಸಿ ದಕ್ಷಿಣ ಭಾರತದಲ್ಲಿ ಕೇಸರಿ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ ಕೀರ್ತಿ, ಯಶಸ್ಸು ಯಡಿಯೂರಪ್ಪನವರಿಗೆ ಸಲ್ಲಬೇಕು.

ದೆಹಲಿಯಲ್ಲಿ ಗರಿಗೆದರಿದ ಚಟುವಟಿಕೆ
ಇತ್ತ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ ಕೂಡಲೇ ಅತ್ತ ದೆಹಲಿಯಲ್ಲಿ ಮುಂದಿನ ಸಿಎಂ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ, ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ತೀವ್ರ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮುಂದಿನ ಸಿಎಂ ಯಾರು ಆಗುತ್ತಾರೆ ಎಂಬುದಕ್ಕೆ ಪಕ್ಷದ ರಾಜ್ಯ ನಾಯಕರಿಗೇ ಸ್ಪಷ್ಟತೆ ಇಲ್ಲ. ಹೀಗಾಗಿ ಹೈ ಕಮಾಂಡ್‌ ತೀರ್ಮಾನವೇ ಅಂತಿಮವಾಗಿದ್ದು ಅವರು ಸೂಚಿಸಿದ ವ್ಯಕ್ತಿ  ಮುಂದಿನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...