NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ಸಿಎಂ ಆಗಿ ಮುಂದುವರಿಯಲಿ : ಶಾಸಕ ಮಹೇಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ:‌ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ, ಪ್ರವಾಹ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಹಾಗಾಗಿ‌ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯಡಿಯೂರಪ್ಪ ಅವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

ಕೊಳ್ಳೇಗಾಲದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನುಭವಿ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರನ್ನು ಬದಲಿಸಿ ಅವರ ಜಾಗಕ್ಕೆ ಬೇರೆಯವರನ್ನು ತಂದು ಕೂರಿಸಿದರೇ ಆಡಳಿತದ, ಇಡೀ ರಾಜ್ಯದ ಪರಿಚಯ ಪಡೆದುಕೊಳ್ಳಲು ಆರೇಳು ತಿಂಗಳು ಸಮಯ ಬೇಕಾಗುತ್ತದೆ.

ಉಳಿದಿರುವ ಕೇವಲ ಎರಡು ವರ್ಷದಲ್ಲಿ ಆರೇಳು ತಿಂಗಳು ವ್ಯರ್ಥವಾಗಲಿದೆ. ಅನುಭವಿ ಯಡಿಯೂರಪ್ಪ ಅವರೇ ಮುಂದುವರಿದರೇ‌‌‌‌‌‌ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದು ಹೇಳಿದರು.

ಪ್ರತಿಭಟನೆ ಹಿಂಪಡೆದ ಅಭಿಮಾನಿಗಳು: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಲು ನಡೆದಿರುವ ಬೆಳವಣಿಗೆಯನ್ನು ಖಂಡಿಸಿ ಹಾಗೂ ಅವರನ್ನೇ ಎರಡೂ ವರ್ಷ ಮುಂದುವರಿಸಬೇಕು ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಶುಕ್ರವಾರ (ಜುಲೈ23) ನಡೆಸಲು ಉದ್ದೇಶಿಸಿದ್ದ ಬೃಹತ್ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಬಿಎಸ್ ವೈ ಅಭಿಮಾನಿಗಳು, ವೀರಶೈವ-ಲಿಂಗಾಯತ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರತಿಭಟನೆ ಕೈಬಿಡಲಾಗಿದೆ ಎಂದು ಸಮಾಜದ ಮುಖಂಡರೊಬ್ಬರು ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...