Please assign a menu to the primary menu location under menu

CrimeNEWSನಮ್ಮರಾಜ್ಯ

ಕೊಳೆತ ಕೋವಿಡ್‌ ಶವ ಪತ್ತೆ ಪ್ರಕರಣದಲ್ಲಿ ಸುರೇಶ್‌ ಕುಮಾರ್‌ ನುಣುಚಿಕೊಳ್ಳಲು ಯತ್ನ: ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟ 15 ತಿಂಗಳ ಬಳಿಕ ಕೋವಿಡ್‌ ರೋಗಿಗಳ ಶವಗಳು ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರೇಶ್‌ ಕುಮಾರ್‌ ಸರ್ಕಾರಕ್ಕೊಂದು ಪತ್ರ ಬರೆದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಎಪಿಯ ಬೆಂಗಳೂರು ನಗರ ಉಪಾಧ್ಯಕ್ಷ ಹಾಗೂ ರಾಜಾಜಿನಗರ ಉಸ್ತುವಾರಿ ಬಿ.ಟಿ.ನಾಗಣ್ಣ, “ಇಎಸ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಇಬ್ಬರು ಕೋವಿಡ್‌ ರೋಗಿಗಳ ಶವವು ಬರೋಬ್ಬರಿ 15 ತಿಂಗಳ ಬಳಿಕ ಪತ್ತೆಯಾಗಿರುವುದು ನಾಚಿಕೆಗೇಡಿನ ಸಂಗತಿ.

ಕೋವಿಡ್‌ ರೋಗಿಗಳನ್ನು ಸರ್ಕಾರ ಎಷ್ಟು ಹೀನಾಯವಾಗಿ ನೋಡಿಕೊಂಡಿದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆ.

ಸುರೇಶ್‌ ಕುಮಾರ್‌ ಅವರು ಶಾಸಕ ಹಾಗೂ ಸಚಿವರಾಗಿದ್ದ ಸಂದರ್ಭದಲ್ಲೇ ಪ್ರಕರಣ ನಡೆದಿದೆ. ಅವರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದ್ದು, ಸಂಪೂರ್ಣ ಜವಾಬ್ದಾರಿಯನ್ನು ಅವರೇ ಹೊರಬೇಕು.

ಅವರು ಉಸ್ತುವಾರಿ ಸಚಿವರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಈಗ ಅವರದೇ ಕ್ಷೇತ್ರದ ಇಎಸ್‌ಐಯ ಅವ್ಯವಸ್ಥೆ ಬಯಲಾಗಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಶೈತ್ಯಾಗಾರದಲ್ಲಿ ಶವವನ್ನು ಇಟ್ಟ ನಂತರ ಅದರ ಮೇಲೆ ಸ್ಟಿಕ್ಕರ್‌ ಅಂಟಿಸುವ ಪದ್ಧತಿಯನ್ನು ಇಎಸ್‌ಐನಲ್ಲಿ ಅನುಸರಿಸಲಾಗುತ್ತದೆ. ಆದರೆ ಈ ಶವಗಳಿಗೆ ಸ್ಟಿಕ್ಕರ್‌ ಅಂಟಿಸದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಕೋವಿಡ್‌ ಸಾವಿಗೆ ಸಂಬಂಧಿಸಿ ಸುಳ್ಳು ಲೆಕ್ಕ ನೀಡುವ ಉದ್ದೇಶದಿಂದಲೇ ಹೀಗೆ ಮಾಡಿರುವ ಸಂಶಯವಿದೆ.

ಆಸ್ಪತ್ರೆಯ ಉನ್ನತ ಅಧಿಕಾರಿಗಳನ್ನು ಬಂಧಿಸಿ ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರಲಿದೆ. ಇನ್ನೂ ಎಷ್ಟು ಶವಗಳನ್ನು ಮುಚ್ಚಿಡಲಾಗಿತ್ತು, ಇದಕ್ಕೆ ಅಸಲಿ ಕಾರಣವೇನು ಎಂಬುದು ಬೆಳಕಿಗೆ ಬರಬೇಕು ಎಂದು ಬಿ.ಟಿ.ನಾಗಣ್ಣ ಆಗ್ರಹಿಸಿದ್ದಾರೆ.

ರೋಗಿಯ ಕುಟುಂಬ ಸದಸ್ಯರು ಸರ್ಕಾರ ಹಾಗೂ ಆಸ್ಪತ್ರೆಯ ಮೇಲೆ ಭರವಸೆಯಿಟ್ಟು ರೋಗಿಗಳನ್ನು ಆಸ್ಪತ್ರೆಗೆ ಸೇರಿಸುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‌ ರೋಗಿ ಮೃತಪಟ್ಟಾಗ ಶವವನ್ನು ಸೂಕ್ತ ರೀತಿಯಲ್ಲಿ ಗೌರವದಿಂದ ಅಂತ್ಯಕ್ರಿಯೆ ಮಾಡುವುದು ಅಥವಾ ಕುಟುಂಬಕ್ಕೆ ಹಸ್ತಾಂತರಿಸುವುದು ಆಸ್ಪತ್ರೆಯ ಜವಾಬ್ದಾರಿಯಾಗಿದೆ.

ಅದರ ಬದಲು ಈ ರೀತಿ 15 ತಿಂಗಳ ಕಾಲ ಕೊಳೆಯುವಂತೆ ಮಾಡಿರುವುದು ಅತ್ಯಂತ ಅಮಾನವೀಯ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲೇಬೇಕು ಎಂದು ಬಿ.ಟಿ.ನಾಗಣ್ಣ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...