NEWSನಮ್ಮರಾಜ್ಯವಿಜ್ಞಾನ

ರಾಜ್ಯಕ್ಕೆ ಹೆಚ್ಚುವರಿ 4 ರೇಕ್ ಕಲ್ಲಿದ್ದಲು ಪೂರೈಕೆಗೆ ಕೇಂದ್ರ ಒಪ್ಪಿಗೆ: ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕ್ಕೆ ಈಗ ಪೂರೈಕೆಯಾಗುತ್ತಿರುವ 10 ರೇಕ್ ಕಲ್ಲಿದ್ದಿ ಲಿನ ಪ್ರಮಾಣವನ್ನು 14 ರೇಕ್‌ಗಳಿಗೆ ಹೆಚ್ಚಿಸಲು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದಜೋಶಿ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿ ಪ್ರವಾಸಮುಗಿಸಿ ರಾಜ್ಯಕ್ಕೆ ಶನಿವಾರ ವಾಪಸ್ ಆದಬೊಮ್ಮಾಯಿ ಸುದ್ದಿಗಾರರ ಜತೆ ಮಾತನಾಡಿದರು.

‘ನಾನಾ ಕಾರಣಗಳಿಂದ ಕಲ್ಲಿದ್ದ ಲು ಕೊರತೆ ಇಡೀ ಜಗತ್ತನ್ನು ಬಾಧಿಸುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಅಗತ್ಯ ವಾದ ಕಲ್ಲಿದ್ದಲು ಸಂಗ್ರಹ ಕಡಿಮೆಯಾಗಬಾರದು ಎಂಬ ಕಾರಣಕ್ಕೆ ಜೋಶಿ ಅವರನ್ನು ಭೇಟಿಮಾಡಿ ಮನವಿಮಾಡಲಾಗಿದೆ.

ಈ ವೇಳೆ ಕರ್ನಾಟಕಕ್ಕೆ ಪೂರೈಸುವ ಪ್ರಮಾಣವನ್ನು ಹೆಚ್ಚಿ ಸುವಂತೆ ಸಚಿವರು, ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದರು.

ಕೇಂದ್ರ ಆರೋಗ್ಯ ಹಾಗೂ ರಸಗೊಬ್ಬ ರ ಸಚಿವ ಮನಸುಖ್ಮಾಂಡವೀಯ ಅವರನ್ನು ಭೇಟಿಯಾಗಿ ಡಿಎಪಿ ಮತ್ತು ಎಂಒಪಿ ರಸಗೊಬ್ಬ ರ ಸರಬರಾಜುಮಾಡಲು ಮನವಿಮಾಡಿದ್ದೇ ನೆ. ಇನ್ನು ಒಂದು ವಾರದಲ್ಲಿ ಸೂಕ್ತ ವ್ಯ ವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಅರ್ಹತೆ ಪಡೆದ ಜನರ ಪೈಕಿ ಶೇ 81ರಷ್ಟು ಜನರಿಗೆಮೊದಲಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯ ದೊಳಗೆ ಈ ಪ್ರಮಾಣವನ್ನು ಶೇ 90ಕ್ಕೆ ಹೆಚ್ಚಿ ಸುವ ಗುರಿ ಹಾಕಿಕೊಳ್ಳಲಾಗಿದೆ ಎಂದೂ ಬೊಮ್ಮಾಯಿ ಹೇಳಿದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ