NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಿಎಂ ಬಸವರಾಜ ಬೊಮ್ಮಾಯಿರಿಗೆ ಕೊಲೆ ಬೆದರಿಕೆ : ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ 

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ಬೊಮ್ಮಾಯಿಯವರೇ.

ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾತ ಮತಗಳಿಕೆ ಪ್ರಯತ್ನ ಮಾಡುತ್ತಿದ್ದೀರಿ. ಬಿಜೆಪಿಯಿಂದ ಅಲ್ಪಸಂಖ್ಯಾತರ ಓಲೈಕೆಯಾಗುತ್ತಿದೆ. ಬೊಮ್ಮಾಯಿಯವರೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಧಾರ್ಮಿಕ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರೇ ನೀವು ಮೊಟ್ಟೆ ಕದ್ದು ಹಣಮಾಡಿದ್ದೀರಿ.

ಇದೀಗ ದೇವಸ್ಥಾನಗಳನ್ನು ಧ್ವಂಸ ಮಾಡಿ ಯಾಕೆ ದುಡ್ಡು ಮಾಡಲು ಹೊರಟಿದ್ದೀರಿ. ಸಂಘಪರಿವಾರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡೋದು ಅಲ್ಲ. ಪರಿವಾರ ಸಂಘಟನೆಗಳು ಬಿಜೆಪಿಯನ್ನೇ ಬಹಿಷ್ಕಾರ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...