CrimeNEWSನಮ್ಮರಾಜ್ಯರಾಜಕೀಯ

ಪೊಲೀಸ್‌ ಸಮುಚ್ಚಯ ಕಳಪೆ ಕಾಮಗಾರಿಗೆ ಸಿಎಂ ಬೊಮ್ಮಾಯಿ ಹೊಣೆ: ಎಎಪಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಬಿನ್ನಿಮಿಲ್‌ನಲ್ಲಿರುವ ಪೊಲೀಸ್‌ ವಸತಿ ಸಮುಚ್ಚಯ ವಾಲಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೇರ ಹೊಣೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದ್ದು, ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದ ಕುರಿತು ಮುಖ್ಯ ನ್ಯಾಯಮೂರ್ತಿ ನಿಗಾದಲ್ಲಿ ತನಿಖೆ ನಡೆಸಬೇಕೆಂದು ಎಂದು ಆಗ್ರಹಿಸಿದೆ.

ಈ ಕುರಿತು ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ಶರತ್‌ ಖಾದ್ರಿ, “ಬಿ.ಎಸ್‌.ಯಡಿಯೂರಪ್ಪನವರ ಆಡಳಿತಾವಧಿಯಲ್ಲಿ ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದಾಗ ಕಟ್ಟಡದ ಕಾಮಗಾರಿ ನಡೆದಿದೆ. 2019ರಲ್ಲೇ ಬಿರುಕು ಕಾಣಿಸಿಕೊಂಡಿದ್ದರೂ ನಿರ್ಲಕ್ಷ್ಯ ತೋರಲಾಗಿತ್ತು ಎಂದು ಆರೋಪಿಸಿದರು.

ಇನ್ನು ನಿರ್ಮಾಣ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಮುಖ್ಯ ನ್ಯಾಯಮೂರ್ತಿ ನಿಗಾದಲ್ಲಿ ತನಿಖೆಯಾದರೆ ಸತ್ಯ ಹೊರಬರಲಿದೆ. ಗುತ್ತಿಗೆದಾರರು, ಇಂಜಿನಿಯರ್‌ಗಳು, ಅಧಿಕಾರಿಗಳು ಹಾಗೂ ಗೃಹಸಚಿವರು ಒಟ್ಟುಗೂಡಿ ದುಡ್ಡು ಹೊಡೆಯುವ ಉದ್ದೇಶದಿಂದ ಕಳಪೆ ಕಾಮಗಾರಿ ಮಾಡಿರುವುದೇ ಇಂದಿನ ಪರಿಸ್ಥಿತಿಗೆ ಕಾರಣ ಎಂದು ದೂರಿದರು.

ಬಿನ್ನಿಮಿಲ್‌ನಲ್ಲಿರುವ ʻಬಿʼ ಬ್ಲಾಕ್‌ ಸದ್ಯ ಎರಡು ಅಡಿ ವಾಲಿದ್ದು, ಇದೇ ರೀತಿ ಅದರ ಪಕ್ಕದಲ್ಲೇ ನಿರ್ಮಿಸಲಾಗಿರುವ ʻಎʼ ಹಾಗೂ ʻಸಿʼ ಬ್ಲಾಕ್‌ ಕಟ್ಟಡಗಳ ನಿರ್ಮಾಣದ ಕುರಿತೂ ತನಿಖೆ ನಡೆಯಬೇಕು. ತ್ಯಾಜ್ಯದ ರಾಶಿಯನ್ನು ಮಣ್ಣಿನಿಂದ ಮುಚ್ಚಿ ಕಟ್ಟಡ ನಿರ್ಮಿಸಲಾಗಿದೆ.

ನೆಲವನ್ನು ಭದ್ರಪಡಿಸಿಕೊಂಡು ಅಡಿಪಾಯ ಹಾಕಲು ನಿರ್ಲಕ್ಷ್ಯ ತೋರಲಾಗಿದೆ. ಕಳಪೆ ಗುಣಮಟ್ಟದ ಸಿಮೆಂಟ್‌ ಬಳಸಿ ಪಿಲ್ಲರ್‌, ಭೀಮ್‌ ಹಾಕಲಾಗಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರ ಕುಟುಂಬಗಳೇ ಸರ್ಕಾರದ ತಪ್ಪಿನಿಂದಾಗಿ ಇಂದು ಅತಂತ್ರ ಸ್ಥಿತಿಗೆ ತಲುಪಿರುವುದು ಬೇಸರದ ಸಂಗತಿ ಎಂದು ಖಾದ್ರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರಾದ ಪಲ್ಲವಿ ಚಿದಂಬರಂ ಮಾತನಾಡಿ, ಬಿನ್ನಿಮಿಲ್‌ ಪೊಲೀಸ್‌ ಕ್ವಾರ್ಟರ್ಸ್‌ಗಳಲ್ಲಿ ಕಟ್ಟಡದ ಲೋಪ ಮಾತ್ರವಲ್ಲದೇ, ಇನ್ನೂ ಅನೇಕ ಸಮಸ್ಯೆಗಳಿವೆ. ಶೌಚಾಲಯದ ಪೈಪುಗಳು ಒಡೆದು ನೀರು ಸೋರುತ್ತಿದೆ.

ದೀರ್ಘಕಾಲದಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಯನ್ನು ತೀವ್ರ ಒತ್ತಡ ಹಾಕಿದ್ದರಿಂದ ಕೆಲ ದಿನಗಳ ಹಿಂದೆಯಷ್ಟೇ ಬಗೆಹರಿಸಲಾಗಿದೆ. ಇನ್ನೂ ಅನೇಕ ಮೂಲಸೌಕರ್ಯಗಳ ಕೊರತೆಯಿದೆ. ಆರಕ್ಷಕರ ಕುಟುಂಬಗಳನ್ನು ಸರ್ಕಾರವು ಶೋಚನೀಯ ಸ್ಥಿತಿಯಲ್ಲಿ ಇಟ್ಟಿರುವುದು ಖಂಡನೀಯ ಎಂದು ಹೇಳಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ