NEWSನಮ್ಮರಾಜ್ಯರಾಜಕೀಯ

ತಿಂಗಳಂತ್ಯಕ್ಕೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆ : ಗ್ರೀನ್‌ ಸಿಗ್ನಲ್‌ ಕೊಟ್ಟ ಹೈ ಕಮಾಂಡ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ. ಜುಲೈ ಅಂತ್ಯದ ವೇಳೆಗೆ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪುತ್ರ ವಿಜಯೇಂದ್ರ ಜೊತೆ ಮೊನ್ನೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಗುಮೊಗದಲ್ಲಿರುವುದು ಕಂಡು ಬಂದಿತ್ತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಸ್ತುತ ಮುಂದುವರಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಿದ್ದರು. ಈಗ ಪ್ರಸ್ತುತ ಎಂಬ ಪದ ಭಾರೀ ಚರ್ಚೆ ಹುಟ್ಟುಹಾಕಿದೆ.

ಇದೇ ಜುಲೈ 26ಕ್ಕೆ ಬಿ.ಎಸ್. ಯಡಿಯೂರಪ್ಪ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಅವಧಿ ಪೂರೈಸಲಿದ್ದಾರೆ. 2 ವರ್ಷ ಪೂರ್ಣಗೊಳಿಸಿದ ಬಳಿಕ ಅನಾರೋಗ್ಯ ಕಾರಣ ನೀಡಿ ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಅವಶ್ಯಕತೆಯಿದ್ದು, ಪ್ರಕ್ರಿಯೆ ಆರಂಭಿಸಿದ್ದೇವೆ. ನೀವು ಮಾಸ್ ಲೀಡರ್, ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. 2 ವರ್ಷದ ಸಂಭ್ರಮ ಪೂರೈಸಿ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬನ್ನಿ. ಆಗಸ್ಟ್ ಮೊದಲ ವಾರದಲ್ಲಿ ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಹೈಕಮಾಂಡ್ ಹೇಳಿದೆ ಎನ್ನಲಾಗಿದೆ.

ಈ ನಡುವೆ ಪದತ್ಯಾಗ ಮಾಡಿದ ಯಡಿಯೂರಪ್ಪ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡುವಂತೆ ಕೆಲ ಬಿಜೆಪಿ ನಾಯಕರು ಸಲಹೆ ನೀಡಿದ್ದು, ಯಡಿಯೂರಪ್ಪ ಅವರು, ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವಂತೆ ಸಹಾಯ ಮಾಡುವುದಾಗಿ ಪುನರುಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪುತ್ರ ವಿಜಯೇಂದ್ರ ಜೊತೆಗೆ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿದ್ದು ಕೂಡ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ತಮ್ಮ ಬಳಿಕ ಪುತ್ರ ವಿಜಯೇಂದ್ರ ಅವರಿಗೆ ಸಿಎಂ ಸ್ಥಾನ ದೊರಕುವಂತೆ ಮಾಡಲು ಯಡಿಯೂರಪ್ಪ ಅವರು ಲಾಬಿ ನಡೆಸುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸುಲಭದ ವಿಚಾರವಲ್ಲ. ಪರ್ಯಾಯ ನಾಯಕರ ಸೃಷ್ಟಿಯ ಬಗ್ಗೆ ಹೈಕಮಾಂಡ್‌ಗೆ ಯೋಚನೆಯಿದ್ದರೂ ಅಂತಹವರ ಶೋಧ ಇನ್ನೂ ಆಗಿಲ್ಲ. ಯಡಿಯೂರಪ್ಪ ಅವರಿಗೆ ಹೋಲಿಕೆಯಾಗುವಂತಹ ಮತ್ತೊಬ್ಬ ಲಿಂಗಾಯತ ನಾಯಕರಾರೂ ರಾಜ್ಯದಲ್ಲಿ ಇಲ್ಲ ಎಂದು ಪಕ್ಷದ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಈ ನಡುವೆ ಒಕ್ಕಲಿಗರ ನಾಯಕ ಸದಾನಂದ ಗೌಡ ಅವರನ್ನು ಮುಂದಿನ ಸಿಎಂ ಮಾಡಲು ಯತ್ನಗಳು ನಡೆದಿದೆ. ಮೋದಿಯವರು ಸದ್ಯ ಸದಾನಂದಗೌಡರಿಗೆ ಸಿಎಂ ಪಟ್ಟ ಕಟ್ಟುವ ಎಲ್ಲ ತಯಾರಿಯಲ್ಲೂ ತೊಡಗಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...