Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಸಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ವಿಪಕ್ಷದ ನಾಯಕ ಸಿದ್ದರಾಮಯ್ಯ ಪರ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗಗಳಿಂದ ನಗರದಲ್ಲಿ ಶನಿವಾರ ಬೃಹತ್ ಪ್ರ ತಿಭಟನೆ ನಡೆಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಜೆಪಿಯು ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರಮಾಡುತ್ತಿದೆ ಎಂದು ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆ ಹಾಗೂ ನಡೆಸುತ್ತಿರುವ ಪ್ರತಿಭಟನೆಗಳನ್ನು ಖಂಡಿಸಿ  ಪ್ರತಿಭಟನಕಾರರು ಆಕ್ರೋ ಶ ವ್ಯಕ್ತಪಡಿಸಿದರು.

ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿ ಬಳಿ ಸೇರಿದಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ ಡೀವಿಯೇಷನ್ ರಸ್ತೆಯಮೂಲಕ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯ ಕ್ಷ ಪಿ.ಮರಿಸ್ವಾ ಮಿ ಅವರುಮಾತನಾಡಿ, ‘ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಬಿಜೆಪಿಯವರು ಸಿದ್ದರಾಮಯ್ಯ ಅವರ ವಿರುದ್ಧ ದಲಿತ ವಿರೋಧಿ ಪಟ್ಟಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅಸೂಯೆಯಿಂದ ಜಾತಿ ಜಾತಿಯನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ.

ದಲಿತರು, ಬಡವರ ಪರವಾಗಿರುವ ದೇಶದ ಏಕೈಕ ನಾಯಕ ಎಂದರೆ ಅದು ಸಿದ್ದ ರಾಮಯ್ಯ ಅವರು. ಎಲ್ಲ ವರ್ಗದ ಏಳಿಗೆ ಬಯಸುವಂತಹ ನಾಯಕ ದೇಶದಲ್ಲಿದ್ದಾರೆ ಎಂದರೆ ಅದು ಸಿದ್ದ ರಾಮಯ್ಯ . ಅವರುಯಾವ ಜಾತಿಗೂ ವಿರೋಧಿಯಲ್ಲ. ಅವರ ಜನಪ್ರಿಯತೆಯನ್ನು ನೋಡಿಮುಂದಿನ ಚುನಾವಣೆಯಲ್ಲಿ ಸೋಲುತ್ತೇ ವೆ ಎಂಬ ಭೀತಿಯಿಂದ ಬಿಜೆಪಿಯವರು ಇಂತಹ ಕೆಲಸಮಾಡುತ್ತಿದ್ದಾರೆ’ ಎಂದು ದೂರಿದರು.

ಮುಖಂಡ ಎ.ಆರ್.ಕೃಷ್ಣಮೂರ್ತಿ ಅವರುಮಾತನಾಡಿ, ‘ಮಾಜಿಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿಮುಖಂಡರು ಕೆಲವು ದಿನಗಳಿಂದ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದ ರಾಮಯ್ಯ ಅವರಿಗೆ ದಲಿತರ ವಿರೋಧಿ ಪಟ್ಟ ಕಟ್ಟ ಬೇಕು ಎಂಬ ಹುನ್ನಾರ ಹಾಗೂ ಅವರ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುವ ಯತ್ನ ಇದರ ಹಿಂದಿದೆ. ಜನತೆಗೆ ಸುಳ್ಳು ಸಂದೇಶಹೋಗವಬಾರದು ಎಂದು ಪಕ್ಷದ ವತಿಯಿಂದ ರಾಜ್ಯ ದಾದ್ಯಂತ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ’ ಎಂದರು.

ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂಬ ಹೇಳಿಕೆ ನೀಡಿದಾಗ ಅದರ ಬಗ್ಗೆ ಬಿಜೆಪಿಯ ಒಬ್ಬರು ಮಾತನಾಡಲಿಲ್ಲ. ಅಂತಹವರು ಇಂದು ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿಮಾತನಾಡುವುದು ಸರಿಯಲ್ಲ ಎಂದರು.

ಮುಖಂಡರಾದ ಎಸ್.ಬಾಲರಾಜು, ಎಸ್.ಜಯಣ್ಣ , ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯ ಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯ ಕ್ಷ ನಾಗರಾಜು, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಜಿಲ್ಲಾ ಮಹಿಳಾ ಘಟಕ ಅಧ್ಯ ಕ್ಷೆ ಲತಾರಾಜಶೇಖರ್ ಜತ್ತಿ , ಪದ್ಮ ಪುರುಷೋತ್ತಮ್, ಗ್ರಾಮಾಂತರ ಮಂಡಲ ಅಧ್ಯ ಕ್ಷೆ ಶಕುಂತಲಾ ಇತರರು ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ