NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ಸಿಗರು ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿ.ಟಿ. ರವಿ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.

ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸ್ತಾನೆ ಇರುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಒಬ್ಬರು. ಸಿದ್ದರಾಮಯ್ಯನವರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿಗಳಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸಂಸತ್ತಿನಲ್ಲಿ ಕಾಂಗ್ರೆಸ್ ವಿಪಕ್ಷಗಳ ಅಸಹಾಕಾರದ ನಡುವೆಯೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ,  ಸಾಮಾಜಿಕ ನ್ಯಾಯ ಬಿಜೆಪಿಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಸಂಸತ್ತನ್ನು ಖಾನ್ ಮಾರ್ಕೆಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್‍ನವರು ಎಂದು ದೂರಿದರು.

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...