NEWSನಮ್ಮರಾಜ್ಯರಾಜಕೀಯ

ಆಡಳಿತದಲ್ಲಿನ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾರದರ್ಶಕ, ದಕ್ಷ, ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಆಡಳಿತಕ್ಕೆ ಅಧಿಕಾರಿಗಳ ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು.

ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನಗೊಳಿಸುವುದು ಎಷ್ಟು ಕಷ್ಟ ಎಂಬುದನ್ನು ಅರಿತೇ ಈ ಮಾತನ್ನಾಡುತ್ತಿದ್ದೇನೆ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಪ್ರಗತಿಪರ, ಪರಿಣಾಮಕಾರಿ ಆಡಳಿತ ಕೊಟ್ಟ ಹೆಗ್ಗಳಿಕೆ ನಮ್ಮ ರಾಜ್ಯದ್ದು. ಬದಲಾದ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬೇಕಾಗಿದೆ. ಸಚಿವ ಸಂಪುಟದ ನಿರ್ಣಯಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಅನುಷ್ಠಾನದಲ್ಲಿ ವಿಳಂಬವಾದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ಆಡಳಿತದಲ್ಲಿ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ. ಆದ್ದರಿಂದ ಸರ್ಕಾರದ ನಿರ್ಣಯಗಳು ನಿಗದಿತ ಕಾಲಮಿತಿಯಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ತಿಳಿಸಿದರು.

ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ನೀತಿ, ನಿಯಮಾವಳಿಗಳು, ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟತೆ ಹೊಂದಿ ಕಾರ್ಯನಿರ್ವಹಿಸಬೇಕು. ಒಳ್ಳೆಯ ಕೆಲಸಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಾಡಿ. ನನ್ನ ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವುದು ಹಾಗೂ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು. ಪ್ರತಿ ಇಲಾಖೆಯಲ್ಲಿ ವರ್ಷಾಂತ್ಯದ ವೇಳೆಗೆ ಶೇ.5 ರಷ್ಟು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು ಎಂದ ಅವರು ನಿಗದಿತ ಕಾಲಮಿತಿಯಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು.

ಜತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ವಿವರವಾಗಿ ಚರ್ಚಿಸಿ, ಗೊಂದಲ ನಿವಾರಣೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮುಖ್ಯಮಂತ್ರಿಯವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಭರವಸೆ ನೀಡಿದರು. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...