NEWSನಮ್ಮರಾಜ್ಯಶಿಕ್ಷಣ-

ಶಿಕ್ಷಣ ಸಚಿವರ ಮನಸ್ಸು ಕರಗಲಿಲ್ಲ: ಖಾಸಗಿ ಶಿಕ್ಷಣ ಸಂಸ್ಥೆಯ ಧನದಾಹಕ್ಕೆ ಪರೀಕ್ಷೆಯಿಂದ ವಂಚಿತಳಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಲೆ ಶುಲ್ಕ ಪಾವತಿಸುವ ಸಮರಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿನಿ ಪರೀಕ್ಷೆಯಿಂದ ವಂಚಿತಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾನು 9ನೇ ತರಗತಿಯಲ್ಲಿ 96% ಅಂಕ ಗಳಿಸಿದ್ದೇನೆ, ಹೀಗಾಗಿ 10 ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಕೊಡಿಸಿ ಎಂದು ವಿದ್ಯಾರ್ಥಿನಿ ಮನವಿ ಮಾಡಿದ್ದಾಳೆ.

ಕೊರಟಗೆರೆಯ ಹನುಮಂತಪುರ ನಿವಾಸಿ ಗ್ರೀಷ್ಮ ನಾಯಕ್.ಎನ್ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21 ನೇ ಸಾಲಿನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದಳು. ಕಳೆದ ವರ್ಷದ ಶಾಲಾ ಶುಲ್ಕ ಮತ್ತು ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವುದಕ್ಕೆ, ಶಾಲಾ ಸಂಸ್ಥೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ನೋಂದಾಯಿಸಿಲ್ಲ.

ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಗ್ರೀಷ್ಮ ನಾಯಕ್.ಎನ್ ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆ ಪರೀಕ್ಷೆಗೆ ನಿರ್ಬಂಧ ಹೇರಿದೆ. ಹೀಗಾಗಿ ನೊಂದ ವಿದ್ಯಾರ್ಥಿನಿ ಡಿಸೆಂಬರ್ ನಲ್ಲಿಯೇ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರ ಬಳಿ ತನ್ನ ಸಮಸ್ಯೆಯನ್ನು ತೋಡಿಕೊಂಡಿದ್ದಳು.

ಆದರೆ, ಶಿಕ್ಷಣ ಸಚಿವ ಮನಸ್ಸು ಮಾತ್ರ ಕರಗಿಲ್ಲ. ಅಂದರೆ ಸಚಿವರ ಶಿಕ್ಷಣ ಸಂಸ್ಥೆಯ ಪರ ನಿಂತಂತೆ ಕಾಣುತ್ತಿದೆ. ಒಬ್ಬ ಪ್ರತಿಭಾವಂತಿ ವಿದ್ಯಾರ್ಥಿನಿಗೆ ಈ ಅನ್ಯಾಯವಾಗುತ್ತಿರುವಾಗ ಸಿಡಿದೇಳಬೇಕಾದ ಸಚಿವರೆ ಈ ರೀತಿ ನಡೆದು ಕೊಂಡರೆ ಹೇಗೆ?

ಇನ್ನು ಪರೀಕ್ಷೆ ಬರೆಯಲೇ ಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ಸದ್ಯ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾಳೆ.

ಇನ್ನು ಈ ವಿಷಯ ಗಮನಕ್ಕೆ ಬಂದ ಮೇಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಬರುವ ಆಗಸ್ಟ್​ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಹೇಳಿ ಕಳುಹಿಸಿದ್ದಾರೆ. ಹೀಗಾಗಿ ನೊಂದ ವಿದ್ಯಾರ್ಥಿನಿ ಪ್ರಸಕ್ತ ಸಾಲಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾಳೆ.

ಜತೆಗೆ ಕೊರೊನಾ ಸೋಂಕಿತ ಮಕ್ಕಳಿಗೂ ಎಕ್ಸಾಂ ಬರೆಯಲು ಅವಕಾಶ ನೀಡಿದ್ದೀರಾ, ಅವರಿಗೆ ಪ್ರತ್ಯೇಕ ಕೊಠಡಿ ಅಥವಾ ಕೋವಿಡ್ ಕೇರ್ ಸೆಂಟರ್​ನಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿದ್ದೀರಾ. ಪರೀಕ್ಷೆ ಬರೆಯುವ ಉತ್ಸಾಹ ಇರುವ ನನಗೆ ಮಾತ್ರ ಯಾಕಿಲ್ಲ ಅವಕಾಶ ಎಂದು ಗ್ರೀಷ್ಮಾ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.

ನೀವು ನಿಗದಿಪಡಿಸಿದ ಎಕ್ಸಾಂ ಸೆಂಟರ್​ಗೆ ಬಂದು ಪರೀಕ್ಷೆ ಎದುರಿಸಲು ಗ್ರೀಷ್ಮಾ ಸಿದ್ಧವಾಗಿದ್ದಾಳೆ ಎಂದು ಗ್ರೀಷ್ಮಾ ಪೋಷಕರು ತಿಳಿಸಿದ್ದು, ಇದೇ 19 ಮತ್ತು 22 ರಂದು ಪರೀಕ್ಷೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆಯಿಂದ ನ್ಯಾಯ ಸಿಗದ ಕಾರಣ ಮಕ್ಕಳ ಹಕ್ಕುಗಳ ಮೊರೆ ಹೋದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರು ಇಂದು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...