NEWSನಮ್ಮರಾಜ್ಯರಾಜಕೀಯ

ಗೊಂದಲ ಸೃಷ್ಟಿಸಿ ವಿರೋಧಿಗಳಿಗೆ ಆಹಾರವಾಗಬೇಡಿ: ರಾಜ್ಯ ಬಿಜೆಪಿಗೆರಿಗೆ ಸಿ.ಟಿ.ರವಿ ಕಿವಿಮಾತು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿ ಗೊಂದ ಸೃಷ್ಟಿರುವ ಮೂಲಕ ವಿಪಕ್ಷದವರು ಮತ್ತು ವಿರೋಧಿಗಳಿಗೆ ಬಾಯಿಗೆ ಆಹಾರವಾಗಬೇಡಿ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿವಿಮಾತು ಹೇಳಿದ್ದಾರೆ.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಉಪಸ್ಥಿತಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

ಕೇಂದ್ರ ಸರ್ಕಾರದ ಸಹಕಾರದಿಂದ ನಾವೆಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಗೊಂದಲಗಳು ಬೇಡ. ಇದು ವಿರೋಧಿಗಳಿಗೆ ಅವಕಾಶವನ್ನು ಮಾಡಿಕೊಡುತ್ತದೆ. ಅಂಥ ಅವಕಾಶ ಮಾಡಿಕೊಡದಿರಿ ಎಂದು ಸಲಹೆ ನೀಡಿದರು.

ಹಾಲನ್ನು ಹಾಲಿನ ಜತೆ ಸೇರಿಸಿದಾಗ ಎಲ್ಲಾ ಹಾಲು ಒಂದೇ. ಅವರೆಲ್ಲರೂ ಬಂದ ಕಾರಣ ನಮಗೆ ಬಹುಮತ ಲಭಿಸಿದೆ. ಅದೂ ನಿಜವೇ ಆಗಿದೆ. 104 ಶಾಸಕರನ್ನು ಬಿಜೆಪಿ ಚಿಹ್ನೆಯಡಿ ಜನರು ಗೆಲ್ಲಿಸಿದ್ದೂ ಸತ್ಯ. 104ಕ್ಕೆ 17 ಸೇರಿದ್ದರಿಂದ 121 ಆಗಿ ಬಹುಮತ ಲಭಿಸಿದೆ. ಆ 17 ಜನರೂ ನಮ್ಮವರೇ. ಅವರನ್ನು ಬೇರೆಯವರೆಂದು ಪರಿಗಣಿಸುವ ಪ್ರಶ್ನೆ ಇಲ್ಲ. ಸ್ವಂತಕ್ಕಾಗಿ- ಸ್ವಾರ್ಥಕ್ಕಾಗಿ ಅಧಿಕಾರ ಅಲ್ಲ. ಸೇವೆಗಾಗಿ ಅಧಿಕಾರವನ್ನು ಬಳಸಿ ನಾವು ಮತ್ತೆ ಗೆಲುವು ಸಾಧಿಸಬೇಕು ಎಂದು ತಿಳಿಸಿದರು.

ಎಷ್ಟೋ ಜನರ ಪ್ರಯತ್ನದ ಫಲವಾಗಿ ಪಕ್ಷ ಬೆಳೆದುಬಂದಿದೆ. ಏರಿಳಿತ ಬಂದಾಗಲೂ ಪಕ್ಷ ಅದನ್ನು ಎದುರಿಸಿ ಇನ್ನಷ್ಟು ದೃಢವಾಗಿ ಬೆಳೆದುಬಂದಿದೆ. ಪಕ್ಷ ದುರ್ಬಲ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷ ಬೆಳೆಯುವ ಸಂದರ್ಭದಲ್ಲಿ ರಾಜಕೀಯ ಧ್ರುವೀಕರಣ ಆಗುವುದೂ ಸಹಜ. ಕಾರ್ಯಕರ್ತರು ನೊಂದುಕೊಳ್ಳದ ರೀತಿಯಲ್ಲಿ ಪಕ್ಷದ ನಾಯಕರು ನಡೆದುಕೊಳ್ಳಬೇಕು. ಆ ರೀತಿಯ ಸೂಚನೆಯನ್ನು ಈಗಾಗಲೇ ಅರುಣ್ ಸಿಂಗ್ ಅವರು ಕೊಟ್ಟಿದ್ದಾರೆ. ನಮ್ಮ ಲಕ್ಷ್ಯ ಜನರ ಹಿತದ ಕಡೆ ಇರಬೇಕು ಎಂದು ಸಲಹೆ ನೀಡಿದರು.

ಕೋವಿಡ್ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತ್ಯುತ್ತಮವಾಗಿ ಪ್ರಯತ್ನ ಮಾಡಿದ್ದರಿಂದ ಕೋವಿಡ್ ಪೀಡಿತರ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಗಳು ಜನಹಿತವನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿವೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂಬುದನ್ನು ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಏನೇ ನಿರ್ಣಯಗಳಿದ್ದರೂ ಪಕ್ಷದ ಸಂಸದೀಯ ಮಂಡಳಿ ಕೈಗೊಳ್ಳುತ್ತದೆ ಎಂದು ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು