NEWSನಮ್ಮರಾಜ್ಯ

ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಟೋಯಿಂಗ್ ಮಾಡಬೇಡಿ: ಗೃಹ ಸಚಿವ ಅರಗ ಜ್ಞಾನೇಂದ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ ನೋ ಪಾರ್ಕಿಂಗ್ ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಗಾರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.

ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿಸಚಿವರು ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಪದೇ ಪದೇ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ತಾಕೀತು ಮಾಡಿದರು.

ಇತ್ತೀಚಿನ ದಿನಗಳಲ್ಲಿ ಪದೇ ಪದೇ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ.

ಮಾಲೀಕರು ಸ್ಥಳದಲ್ಲೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಜತೆಗೆ ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ವರದಿಯಾಗಿವೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ