NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ವಿರುದ್ಧ ನನ್ನ ಖಳನಾಯಕನಾಗಿ ಮಾಡಬೇಡಿ: ಸಚಿವ ಸಿಪಿವೈ ಮಾರ್ಮಿಕ ನುಡಿ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ನನ್ನನ್ನು ಖಳನಾಯಕನನ್ನಾಗಿ ಮಾಡಬೇಡಿ. ಅವರ ವಿರುದ್ಧ ಮಾತನಾಡಿದರೆ ನಾವು ಸುಟ್ಟು ಹೋಗ್ತಿವಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ವೈ ನಮ್ಮ ನಾಯಕರು. ಅವರನ್ನು ಟಾರ್ಗೆಟ್ ಮಾಡುವುದು, ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ ಎಂದರು.

ಇನ್ನು ನಮ್ಮ ಪಕ್ಷದಲ್ಲಿ ಆಂತರಿಕ ಸಮಸ್ಯೆಗಳಿವೆ. ಹಾಗಾಗಿ ನಾಯಕರ ಮುಂದೆ ಹೇಳಿಕೊಳ್ಳಲು ದೆಹಲಿಗೆ ಹೋಗುತ್ತಿದ್ದೇವೆಯೇ ವಿನಃ ಬೇರೆ ವಿಷಯವಿಲ್ಲ. ಇನ್ನು ಆ ಫಲಿತಾಂಶ ಯಾವಾಗ ಬರುತ್ತದೆಯೋ ನೋಡೋಣ. ಪಕ್ಷದ ಹಿರಿಯರು ಯಾವಾಗ ತೀರ್ಮಾನ ಮಾಡುತ್ತಾರೋ ಅವಾಗಲೇ ಫಲಿತಾಂಶ ಬರುತ್ತೆ ಎಂದು ತಿಳಿಸಿದರು.

ಶಾಸಕ ಯತ್ನಾಳ್ ಹಾಗೂ ಬಸವ ಮೃತ್ಯುಂಜಯ ಸ್ವಾಮೀಜಿಯವರ ಭೇಟಿ ಕುರಿತು ಸ್ಪಷ್ಟನೆ ನೀಡಿದ ಯೋಗೇಶ್ವರ್, ಪ್ರವಾಸೋದ್ಯಮ ಇಲಾಖೆ ಮೂಲಕವೇ ರಾಜ್ಯದಲ್ಲಿ ನಾಲ್ಕು ಕಡೆ ತ್ರಿ ಸ್ಟಾರ್‌ ಹೋಟೆಲ್‌ ಕಟ್ಟಲು ನಿರ್ಧರಿಸಿದ್ದೇವೆ. ಹಾಗಾಗಿ ಕಲಬುರಗಿಯಲ್ಲಿ ಹೋಟೆಲ್ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಸಂಬಂಧ ಹೋಗುತ್ತಿದ್ದಾಗ ಅವರ ಕ್ಷೇತ್ರಕ್ಕೆ ಭೇಟಿ ಮಾಡಿರುವೆ ಅಷ್ಟೇ. ಬೇರೆ ವಿಚಾರವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಯತ್ನಾಳ್ ಹಾಗೂ ನಾವು ಸಮಕಾಲೀನರು. ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿಯ ಮೂವರಿಂದ ಅನ್ಯಾಯವಾಗಿದೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಅವರ ದೆಹಲಿ ಭೇಟಿ ವಿಷಯವೂ ನನಗೆ ಗೊತ್ತಿಲ್ಲ ಎಂದರು.

ಅಂಜನಾದ್ರಿ ಬೆಟ್ಟ ವನ್ನು ಕೇವಲ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ನಾಲ್ಕಾರು ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿ ಮಾಡಬೇಕಿದೆ. ಅದಕ್ಕೆ ಸಾವಿರಾರು ಕೋಟಿ ರೂ. ಬೇಕಾಗುತ್ತದೆ. ಇಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ಈ ದೃಷ್ಟಿಯಿಂದ ಹಲವು ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಅಂಜನಾದ್ರಿ ಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಇಲ್ಲಿ ಹಲವು ಸಾಕ್ಷಿ ಪುರಾವೆಗಳಿವೆ. ಪೌರಾಣಿಕ ಐತಿಹಾಸಿಕ ಹಿನ್ನೆಲೆಯಿದೆ. ಸುಮ್ನೆ ಯಾರೋ ಹೇಳುತ್ತಾರೆ ಎಂದು ನಾವು ಸುಮ್ಮನಿರೋದಿಲ್ಲ. ಅಂಜನಾದ್ರಿ ಯಲ್ಲಿ ಹನುಮಂತ ಜನಿಸಿದ್ದು ಎಂಬುದು ಸರ್ಕಾರದ ನಿಲುವಾಗಿದೆ. ಇನ್ನು ಇದರ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...