NEWSನಮ್ಮರಾಜ್ಯ

ವಾಹನ ಚಾಲನೆ ವೇಳೆ ಸಂಚಾರಿ ನಿಯಮ ತಪ್ಪದೇ ಪಾಲಿಸಿ : ನ್ಯಾ. ಪುಟ್ಟರಾಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಹನಗಳ ಚಾಲನೆ ಸಮಯದಲ್ಲಿ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಮಂಗಳವಾರ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ 2021ರ ಪ್ರಯುಕ್ತ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ ಹಾಗೂ ವಾಹನ ಚಾಲನಾ ಅನುಜ್ಞಾಪತ್ರಗಳ ವಿತರಿಸಿ ಮಾತನಾಡಿದರು.

ಸಾರ್ವಜನಿಕರಿಗೆ ಕಾನೂನಿನ ಅರಿವು ಹಾಗೂ ನೆರವಿನ ಅಗತ್ಯವಿದ್ದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅವರು ಮಾತನಾಡಿ, ವಾಯುಮಾಲಿನ್ಯದಿಂದ ವಾತಾವರಣದಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಆರೋಗ್ಯ ಸಮಸ್ಯೆ ಎದುರಿಸಬೇಕಾಗಿದೆ ಎಂದರು.

ಪ್ರತಿಯೊಬ್ಬರೂ ಗಿಡಮರಗಳನ್ನು ಹೆಚ್ಚಾಗಿ ಬೆಳೆಸುವುದರ ಮೂಲಕ ವಾಯುಮಾಲಿನ್ಯ ತಡೆಗಟ್ಟಬಹುದಾಗಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಯಿಂದ ಇಂಧನ ಖರ್ಚಿನ ಉಳಿತಾಯವಾಗುತ್ತದೆ ಹಾಗೂ ಪರಿಸರದ ಸಂರಕ್ಷಣೆ ಆಗುತ್ತದೆ. ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.

ರಾಣೇಬೆನ್ನೂರಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಾಸ್ತಾಮಿಕವಾಗಿ ಮಾತನಾಡಿ, ಸಾರ್ವಜನಿಕರು ತಮ್ಮ ವಾಹನಗಳನ್ನು ಸುಸ್ಥಿಯಲ್ಲಿಟ್ಟುಕೊಳ್ಳಬೇಕು ಹಾಗೂ ಕಾಲಕಾಲಕ್ಕೆ ವಾಹನಗಳ ವಾಯುಮಾಲಿನ್ಯವನ್ನು ತಪಾಸಣೆ ಕೇಂದ್ರಗಳಲ್ಲಿ ಪರೀಕ್ಷಿಸಿಕೊಂಡು ಪ್ರಮಾಣ ಪತ್ರಗಳನ್ನು ನಿಯಮಿತವಾಗಿ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಚಾಲನಾ ಅನುಜ್ಞಾ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಹಿರೇಮಠ, ಮೋಟಾರು ವಾಹನ ಚಾಲನಾ ತರಬೇತಿ ಶಾಲೆಗಳ ಮುಖ್ಯಸ್ಥರು, ಶ್ರೀಪಾದ ಬ್ಯಾಳಿ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ