Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ: ನಟ ಚೇತನ್‌ಗೆ ಭರವಸೆ ಕೊಟ್ಟ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅವರು ಸಾರಿಗೆ ನೌಕರರ ಪರವಾಗಿ ಸಚಿವ ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮುಷ್ಕರದ ಸಮಯದಲ್ಲಿ ವಜಾ, ವರ್ಗಾವಣೆ, ಅಮಾನತು ಮತ್ತು ನೌಕರರ ವೇತನದ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಈ ವೇಳೆ ಆದಷ್ಟು ಶೀಘ್ರ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ನೌಕರರ ಪರವಾಗಿ ಮನವಿ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚೇತನ್ ಅವರ ಮನವಿಗೆ ಸ್ಪಂದಿಸಿದ ಸಚಿವರು ನೌಕರರ ಎಲ್ಲಾ ರೀತಿಯ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮತ್ತೊಮ್ಮೆ ಭರವಸೆ ನೀಡಿದರು.

ಈಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಹೀಗಾಗಿ ಆ ಚುನಾವಣೆ ನಡೆದ ಬಳಿಕ ನೌಕರರ ಎಲ್ಲ ಸಮಸ್ಯೆಗಳನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದಲೂ ನಿಖರವಾದ ಮಾಹಿತಿ ಪಡೆದು ನೌಕರರಿಗೆ ಸ್ಪಂದಿಸುತ್ತೇನೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದರು.

ಜತೆಗೆ ಈಗಾಗಲೇ ಘಟಕದ ಎಲ್ಲ ಅಧಿಕಾರಿಗಳಿಗೂ ನೌಕರರ ಜತೆ ಸ್ನೇಹದಿಂದ ವರ್ತಿಸಿ ಇಲ್ಲದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದೇನೆ. ಹೀಗಾಗಿ ಘಟಕದಲ್ಲಿ ಯಾವುದೇ ಅಧಿಕಾರಿಗಳು ತೊಂದರೆ ನೀಡಿದರೂ ಕೂಡಲೇ ನಮ್ಮ ಗಮನಕ್ಕೆ ತರುವ ಕೆಲಸ ಮಾಡಿ, ಇಲ್ಲದಿದ್ದರೆ ಅಧಿಕಾರಿಗಳು ನಿಮ್ಮ ಜತೆ ಹೇಗೆ ವರ್ತಿಸುತ್ತಿದ್ದಾರೆ ಎಂಬುವುದು ತಿಳಿಯುವುದಿಲ್ಲ ಎಂದು ಸಲಹೆ ನೀಡಿದರು.

ಇನ್ನು ಈಗಾಗಲೇ ವಜಾಗೊಂಡಿರುವ ಎಲ್ಲಾ ನೌಕರರು ಕಾರ್ಮಿಕ ನ್ಯಾಯಲಯದಲ್ಲಿ ಪ್ರಕರಣ ದಾಖಲಿಸಿ ಎಂದು ಹೇಳಿದ್ದೇನೆ. ನೌಕರರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದರೆ ಮುಂದಿನ ಕ್ರಮ ಜರುಗಿಸಲು ನಮಗೆ ಅನುಕೂಲವಾಗುತ್ತದೆ. ನೌಕರರ ವಿರುದ್ಧ ನಡೆದುಕೊಂಡಿರುವ ಅಧಿಕಾರಿಗಳಿಗೂ ಕಾನೂನು ವ್ಯಾಪ್ತಿಯಲ್ಲಿ ಪಾಠ ಕಲಿಸಬಹುದು ಎಂದು ಹೇಳಿದ್ದಾರೆ.

ಕೆಲ ಅಧಿಕಾರಿಗಳು ತಮ್ಮ ದೂಂಡಾವರ್ತನೆಯಿಂದ ನೌಕರರನ್ನು ಹಿಂಸಿಸುತ್ತಿದ್ದಾರೆ. ಜತೆಗೆ ಕಾನೂನನ್ನು ಗಾಳಿಗೆ ತೂರಿ ನೌಕರರ ವಿರುದ್ಧ ಕ್ಷುಲ್ಲಕ ಕಾರಣಕ್ಕೂ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಶಿಕ್ಷೆ ನೀಡುತ್ತಿದ್ದಾರೆ. ಇದೆಲ್ಲವೂ ನಮಗೆ ಈಗ ತಿಳಿಯುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.

ಇನ್ನು ಈ ಹಿಂದೆ ನೌಕರರ ಬಗ್ಗೆ ಅಧಿಕಾರಿಗಳು ಯಾವ ಧೋರಣೆ ಹೊಂದಿದ್ದರು ಎಂಬುವುದು ಮುಖ್ಯವಲ್ಲ ಇನ್ನು ಮುಂದೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ಮಾಡಿದ ತಪ್ಪಿಗೆ ಅಧಿಕಾರಿಗಳು ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ಆದರೆ, ಕೊಟ್ಟ ಭರವಸೆಯನ್ನು ಸಚಿವರು ಇನ್ನೂ ಈಡೇರಿಸಿಲ್ಲ. ಈ ನಡುವೆ ಮತ್ತೆ ಭರವಸೆ ಕೊಡುತ್ತಿರುವುದನ್ನು ನಂಬಬೇಕೋ ಬಿಡಬೇಕೋ ಎಂಬ ಗೊಂದಲದಲ್ಲಿ ನೌಕರರು ಇದ್ದಾರೆ. ಇದಕ್ಕೆಲ್ಲ ಸಚಿವರು ತಾವು ಕೊಟ್ಟ ಭರವಸೆ ಈಡೇರಿಸುವ ಮೂಲಕ ಉತ್ತರಕೊಡಬೇಕಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ