Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ಇಂದು ಸಂಜೆಯೊಳಗೆ ಸಿಗಲಿದೆಯೇ ಸಿಹಿ ಸುದ್ದಿ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಇಲಾಖೆ ನೌಕರರ ಹಿತಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ಮಧ್ಯಾಹ್ನದ ನಂತರ ಮಹತ್ವದ ನಿರ್ಧಾರ ತಿಳಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ ಸಮಯದಲ್ಲಿ ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್‌ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ನೌಕರರಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಅದಂತೆ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ಅಧಿಕೃತವಾಗಿ ಇಂದು ನಡೆಸುವ ಸುದ್ದಿಗೋಷ್ಠಿಯಲ್ಲಿ ಘೊಷಣೆ ಮಾಡುವ ಬಗ್ಗೆ ಬಹುತೇಕ ಖಚಿತವಾಗಿದೆ.

ಸಚಿವರು ಹೋದ ಕಡೆ ಅವರನ್ನು ಭೇಟಿ ಮಾಡಿ, ಮುಷ್ಕರದ ವೇಳೆ ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್‌ ಪ್ರಕರಣಗಳಾಗಿರುವುದನ್ನು ವಾಪಸ್‌ ಪಡೆದು ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೂಟದ ಪದಾಧಿಕಾರಿಗಳು ಮನವಿ ಮಾಡಿಕೊಂಡು ಬಂದಿದ್ದರು.

ಅದಕ್ಕೆ ಸಕರಾತ್ಮಕವಾಗಿ ಪ್ರತಿಕ್ರಿಯಿಸುತ್ತಲೆ ಬಂದಿದ್ದ ಸಚಿವ ಶ್ರೀರಾಮುಲು ನಿಮ್ಮ ಸಮಸ್ಯೆ ನನಗೆ ಅರ್ಥವಾಗಿದೆ. ಆದಷ್ಟು ಶೀಘ್ರದಲ್ಲೇ ಆ ಎಲ್ಲ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.

ಅಲ್ಲದೆ ಈ ಸಂಬಂಧ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳೊಂದಿಗೆ ಚರ್ಚಿಸಲಿದ್ದೇನೆ. ಜತೆಗೆ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಒಂದು ಶಾಶ್ವತವಾದ ಪರಿಹಾರಕ್ಕಾಗಿ ಈ ರೀತಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದರು.

ಕಳೆದ ಸೋಮವಾರವೇ ಸುದ್ದಿಗೋಷ್ಠಿ ನಡೆಸಿ ಎಲ್ಲ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ನೌಕರರು ಭರವಸೆ ಇಟ್ಟುಕೊಂಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಬದಲಾವಣೆಯಾದ ಹಿನ್ನೆಲೆಯಲ್ಲಿ ಇಂದು (ಸೆ.20) ಮಧ್ಯಾಹ್ನದ ಬಳಿಕ ಸುದ್ದಿಗೋಷ್ಠಿ ನಡೆಸುವ ಮೂಲಕ ಎಲ್ಲ ವಿಷಯವನ್ನು ತಿಳಿಸುವುದಾಗಿ ಸಚಿವರು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ