NEWSನಮ್ಮರಾಜ್ಯಶಿಕ್ಷಣ-

ತರಾತುರಿಯಲ್ಲಿ ಶಾಲಾ-ಕಾಲೇಜ್‌ ಪುನಾರಂಭಿಸುವ ನಿಮ್ಮ ಮೂರ್ಖತನ ಕೈಬಿಡಿ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದ ಭವಿಷ್ಯದ ಬೆನ್ನೆಲುಬು,ಆಧಾರಸ್ತಂಭ ಹಾಗೂ ಆಸ್ತಿ ಗಳಾಗಿರುವ ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಶಾಲಾ ತರಗತಿಗಳನ್ನು ಪ್ರಾರಂಭಿಸುವ ನಿಮ್ಮ ಮೂರ್ಖತನವನ್ನು ತಕ್ಷಣವೇ ಕೈಬಿಡಬೇಕೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಮೂರನೇ ಅಲೆ ವ್ಯಾಪಕವಾಗಿ ಹರಡುವ ಭೀತಿ ಇದೆ. 18 ವರ್ಷದ ಒಳಗಿನ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಆತಂಕ ಸರ್ಕಾರಕ್ಕೆ ಗೊತ್ತಿದ್ದರೂ ಸಹ ಶಾಲಾ ತರಗತಿಗಳನ್ನು ಪ್ರಾರಂಭ ಮಾಡುವ ಇಂಗಿತವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ವ್ಯಕ್ತಪಡಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದರು.

ರಾಜ್ಯದಲ್ಲಿ ಅತ್ಯಂತ ಗೊಂದಲಗಳ ಗೂಡಾಗಿರುವ ಶಾಲಾ ಶುಲ್ಕಗಳ ವಿಚಾರವನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಮಹತ್ವದ ಯಾವುದೇ ದಿಟ್ಟ ನಿರ್ಧಾರವನ್ನು ಇದುವರೆವಿಗೂ ತೆಗೆದುಕೊಂಡಿಲ್ಲ. ಕಳೆದ ಬಾರಿ 70% ಕಲಿಕಾ ಶುಲ್ಕವನ್ನು ಮಾತ್ರ ಕಟ್ಟಬೇಕೆಂಬ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಅನಗತ್ಯವಾಗಿ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿಕೊಂಡು ಸರ್ಕಾರದ ಹೆಗಲ ಮೇಲಿದ್ದ ನೈತಿಕ ಜವಾಬ್ದಾರಿಯನ್ನು ಇಳಿಸಿಕೊಂಡಿದ್ದಾರೆ ಎಂದರು.

ಸರ್ಕಾರದ ಅಂಕಿ ಅಂಶಗಳ ಪ್ರಕಾರವೇ ಈಗಾಗಲೇ ರಾಜ್ಯದಲ್ಲಿ 2,38,252 ಕ್ಕೂ ಹೆಚ್ಚು 18 ವರ್ಷದ ಒಳಗಿನ ಮಕ್ಕಳಿಗೆ ಕೊರೊನಾ ಸೋಂಕು ತಗಲಿದೆ. ಇವರಲ್ಲಿ 117 ಮಕ್ಕಳು ಈಗಾಗಲೇ ಸಾವನ್ನಪ್ಪಿದ್ದಾರೆ. ಆದರೆ ವಾಸ್ತವದಲ್ಲಿ ಇನ್ನೂ ಹೆಚ್ಚು ಸಾವು ನೋವುಗಳಾಗಿರುವ ಸಾಧ್ಯತೆಯಿದೆ. 18 ವರ್ಷದ ಒಳಗಿನ ಮಕ್ಕಳಿಗೆ ಸರ್ಕಾರವು ಇದುವರೆವಿಗೂ ಯಾವುದೇ ಲಸಿಕೆಯನ್ನು ನೀಡುವ ಕಾರ್ಯಕ್ರಮಗಳನ್ನು ಪ್ರಕಟಿಸಿಲ್ಲ. ರಾಜ್ಯದ 4.5 ಲಕ್ಷ ದಷ್ಟು ಪೌಷ್ಠಿಕಾಂಶದ ಕೊರತೆ ಹೊಂದಿರುವ ಮಕ್ಕಳು ಇದ್ದಾರೆ.

ತಜ್ಞರ ಸಮಿತಿ ನೀಡಿರುವ ವರದಿಯ ಪ್ರಕಾರ ಆನ್ ಲೈನ್ ತರಗತಿಗಳು ಸಂಪೂರ್ಣ ವೈಫಲ್ಯವಾಗಿದ್ದು ಶೈಕ್ಷಣಿಕ ಕಂದರ ಉಂಟು ಮಾಡಿದೆ ಎಂದು ತಿಳಿಸಿದೆ. ಇದರ ನೇರ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳಬೇಕಾಗಿದೆ. ಶಾಲಾ ಮಕ್ಕಳಿಗೆ ಸೂಕ್ತ ವೈಜ್ಞಾನಿಕ ಪರಿಕರಗಳನ್ನು ನೀಡದೆ, ತಾಂತ್ರಿಕತೆಯನ್ನು ಅಳವಡಿಸಿ ಕೊಳ್ಳಲು ಸಹಾಯ ನೀಡದೆ ಸರ್ಕಾರವು ತನ್ನ ಬೇಜವಾಬ್ದಾರಿ ತನವನ್ನು ತೋರಿಸಿ ಇಂದು ಈ ರೀತಿಯ ಶೈಕ್ಷಣಿಕ ಬಿಕ್ಕಟ್ಟು ತಲೆದೋರಲು ನೇರ ಹೊಣೆಯಾಗಿದೆ ಎಂದು ಕಿಡಿಕಾರಿದರು.

ಈ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಹ ನಡೆಸೇ ತೀರುತ್ತೇವೆ ಎಂಬ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿರ್ಲಜ್ಜ ಧೋರಣೆಯಿಂದಾಗಿ ಮಕ್ಕಳಲ್ಲಿ ರೋಗಗಳು ವ್ಯಾಪಕವಾಗಿ ಹರಡುವ ಭೀತಿ ಉಂಟಾಗಿದೆ ಎಂದರು.

ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪಾಲ್ ಅವರು ಸಹ ಶಾಲೆಗಳು ಆರಂಭವಾದರೆ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿಯು ನೀಡಿರುವ ವರದಿಯನ್ನು ತಪ್ಪಾಗಿ ಅರ್ಥೈಸಿಕೊಂಡು ಸರ್ಕಾರವು ಆತುರಾತುರದಲ್ಲಿ ತರಗತಿಗಳನ್ನು ಪ್ರಾರಂಭ ಮಾಡುತ್ತೇವೆಂದು ಹೇಳುತ್ತಿರುವುದು ಎಲ್ಲೋ ಒಂದು ಕಡೆ ಸರ್ಕಾರವು ಖಾಸಗಿಯವರೊಂದಿಗೆ ಕೈಜೋಡಿಸಿ ಡೊನೇಷನ್ ದಂಧೆಗೆ ಇಂಬು ನೀಡುತ್ತಿದೆ ಎಂದು ಮೋಹನ್ ದಾಸರಿ ಅನುಮಾನ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಮಾಧ್ಯಮ ಸಂಚಾಲಕಿ ಉಷಾ ಮೋಹನ್ ಇದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ