Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ: ನಾವು ಎಚ್ಚೆತ್ತುಕೊಳ್ಳಬೇಕು ಎಂದ ಮಾಜಿ ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಮುಂದೆ ನಿರಂತರ ಚುನಾವಣೆಗಳು ಬರುತ್ತಿದ್ದು, ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು ಎಂದು ಸಲಹೆ ನೀಡಿದರು.

ಪಕ್ಷ ಸಂಘಟನೆಗೆ ಯಡಿಯೂರಪ್ಪ ಪ್ರವಾಸಕ್ಕೆ ಒಬ್ಬನೇ ಹೋಗುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಯಡಿಯೂರಪ್ಪ ಪ್ರವಾಸ ಹೊರಟರೇ ಒಬ್ಬನೇ ಹೋಗ್ತಾನೇನು? ನಾನು ಪ್ರವಾಸ ಹೊರಟರೆ ಶಾಸಕರು, ಸಂಸದರು, ಕಾರ್ಯಕರ್ತರು ಎಲ್ಲರೂ ಬರ್ತಾರೆ. ನಾನು ಒಬ್ಬನೇ ಪ್ರವಾಸ ಹೊರಡುವ ಸ್ಥಿತಿ ಬಂದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ. ಹೀಗಾಗಿ ನಮ್ಮ ಸಂಘಟನೆ, ಶ್ರಮ, ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ನಮಗೆ ಕೇಂದ್ರದ ಲೋಕಸಭಾ ಚುನಾವಣೆ ಕಷ್ಟವಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಬಿಜೆಪಿ ಮುಖಂಡರನ್ನು ಮಾಜಿ ಸಿಎಂ ಎಚ್ಚರಿಸಿದರು.

ದಾವಣಗೆರೆಯಲ್ಲಿ ಯಾವತ್ತೇ ಕಾರ್ಯಕ್ರಮ ಮಾಡಿದರೂ 40ರಿಂದ 50 ಸಾವಿರ ಜನರು ಸೇರುತ್ತಿದ್ದರು. ವಿಧಾನಸಭೆಯಲ್ಲಿ ಒಬ್ಬರೇ ಇದ್ದಾಗಲೂ ಹಿಂತಿರುಗಿ ನೋಡಲಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸಿದ ಪರಿಣಾಮವಾಗಿ ಇಂದು ನಾವು ಅಧಿಕಾರದಲ್ಲಿ ಇದ್ದೇವೆ ಎಂದರು.

ಇನ್ನು ವಿಶ್ವವೇ ಅಚ್ಚರಿಯಿಂದ ನೋಡುವ ನರೇಂದ್ರ ಮೋದಿ ನಾಯಕತ್ವ ನಮಗೆ ಸಿಕ್ಕಿದ್ದು ನಮ್ಮ ಸೌಭಾಗ್ಯ. ನರೇಂದ್ರ ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ರಾಮದಾಸ್ ಮೈಸೂರಿನಲ್ಲಿ ಅರ್ಥಪೂರ್ಣವಾಗಿ ನಡೆಸಿದ್ದರು. ಇದೇ ತರದ ಕಾರ್ಯಕ್ರಮಗಳನ್ನು ರಾಜ್ಯದ ಉದ್ದಗಲಕ್ಕೂ ನಡೆಸಬೇಕು. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಸಂಘಟನೆ ಬಲ ಪಡಿಸಬೇಕು ಎಂದು ಹೇಳಿದರು.

ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗದ ಮುಖಂಡರನ್ನು ಬಲಪಡಿಸಬೇಕು. ಪ್ರತಿ ಬೂತ್​ಗಳಲ್ಲಿ 20ರಿಂದ 25 ಮಹಿಳೆಯರ ತಂಡ, ಯುವಮೋರ್ಚಾ ತಂಡ ನಮ್ಮ ಜತೆ ಗಟ್ಟಿಯಾಗಿ ನಿಲ್ಲಬೇಕು. ಈಗಿನಿಂದಲೇ ಸಂಘಟನೆ ಮಾಡಲು ಕಾರ್ಯತತ್ಪರರಾಗಬೇಕು ಎಂದರು.

ರಾಜ್ಯದ ಚುನಾವಣೆ ಸುಲಭವಿಲ್ಲ. ಹಾನಗಲ್, ಸಿಂಧಗಿ ಉಪ ಚುನಾವಣೆ ಸುಲಭವಿಲ್ಲ. ಮಂದಿರ ಕೆಡವಿದ ಬಗ್ಗೆ ಚರ್ಚೆ ಆಗ್ತಿದೆ. ಯಾವುದೇ ಕಾರಣಕ್ಕೆ ಮಂದಿರ ಒಡೆಯಲು ಅವಕಾಶ ಕೊಡುವುದಿಲ್ಲ. ಈಗ ಇರುವ ಆದೇಶ ಸರಿ ಇಲ್ಲ ಅಂತ ಸುಪ್ರಿಂ ಕೋರ್ಟ್ ಗೆ ಮೊರೆ ಹೋಗೋದಕ್ಕೂ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನು ಕಾರ್ಯಕರ್ತರು ಯಾರೂ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. 25 ಎಂಎಲ್​ಸಿ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ. ಮುಂದಿನ ವರ್ಷ ಚುನಾವಣೆ ವರ್ಷವಾಗಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ