Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ SSLC Exam ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ KSRTC ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು SSLC ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

SSLC ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲ SSLC ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, SSLC ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಸ್‌ ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ... ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನ...