NEWSನಮ್ಮರಾಜ್ಯಸಿನಿಪಥ

ಕನ್ನಡ ಕಿರುತೆರೆ ಧಾರಾವಾಹಿ ಕಲಾವಿದರಿಂದ ನ.28ರಂದು ‘ಅಪ್ಪು ಅಮರ’ ಕಾರ್ಯಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳೆಲ್ಲರೂ ಸೇರಿ ಇತ್ತೀಚೆಗೆ ‘ಪುನೀತ ನಮನ’ ಕಾರ್ಯಕ್ರಮ ನಡೆಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಆ ಕಾರ್ಯಕ್ರಮ ಮಾಡಲಾಗಿತ್ತು. ಈಗ ಅದೇ ಮಾದರೆಯಲ್ಲೇ ಕನ್ನಡ ಕಿರುತೆರೆ ಧಾರಾವಾಹಿ ಕಲಾವಿದರು ಮತ್ತು ತಂತ್ರಜ್ಞರು ಕೂಡ ಮತ್ತೊಂದು ಕಾರ್ಯಕ್ರಮ ಏರ್ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್ ಅವರನ್ನು ಇಡೀ ದಕ್ಷಿಣ ಭಾರತ ಚಿತ್ರರಂಗವೇ ಮಿಸ್​ ಮಾಡಿಕೊಳ್ಳುತ್ತಿದೆ. ಅವರು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ. ಕಿರುತೆರೆಯಲ್ಲೂ ಛಾಪು ಮೂಡಿಸಿದ್ದರು.

‘ಕನ್ನಡದ ಕೋಟ್ಯಧಿಪತಿ’, ‘ಫ್ಯಾಮಿಲಿ ಪವರ್​’ ಶೋಗಳನ್ನು ನಡೆಸಿಕೊಟ್ಟಿದ್ದರು. ‘ನೇತ್ರಾವತಿ’ ಮುಂತಾದ ಸೀರಿಯಲ್​ಗಳನ್ನು ನಿರ್ಮಾಣ ಮಾಡಿದ್ದರು. ಹಾಗಾಗಿ ಅವರಿಗೆ ಮನರಂಜನಾ ವಾಹಿನಿಗಳ ಜತೆ ಇದ್ದ ಒಡನಾಟ ಕೂಡ ಸದಾ ನೆನಪಿನಲ್ಲಿ ಉಳಿಯುವಂಥದ್ದು. ಆದ್ದರಿಂದ ‘ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​’ ವತಿಯಿಂದ ‘ಅಪ್ಪು ಅಮರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ನ.28ರ ಭಾನುವಾರದಂದು ಸಂಜೆ 4 ಗಂಟೆಗೆ ಜಯನಗರ ನ್ಯಾಷನಲ್​ ಕಾಲೇಜಿನ ಎಚ್​.ಎನ್​. ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಕಿರುತೆರೆಯ ಬಹುತೇಕ ಎಲ್ಲ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸುವುದರ ಜೊತೆಗೆ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ವಿಶೇಷ ಕಾರ್ಯಕ್ರಮವಾಗಿ ‘ಅಪ್ಪು ಅಮರ’ ಇವೆಂಟ್​ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

‘ಅಪ್ಪು ಅಮರ’ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲ ಧಾರಾವಾಹಿ ನಿರ್ಮಾಣ ಸಂಸ್ಥೆಗಳ ಮುಖ್ಯಸ್ಥರ ಜೊತೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್​ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನ.28ರಂದು ಎಲ್ಲ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲು ಸೂಚಿಸಲಾಗಿದೆ. ಆ ಮೂಲಕ ಎಲ್ಲ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲ ಆಗುವಂತೆ ಮಾಡಿಕೊಡಲಾಗುತ್ತಿದೆ.

ಯಾವೆಲ್ಲ ಕಲಾವಿದರು ಈ ಕಾರ್ಯಕ್ರಮಕ್ಕೆ ಬರುತ್ತಾರೆ? ಬೇರೆ ಯಾರಿಗೆಲ್ಲ ಪ್ರವೇಶ ಇದೆ? ಒಟ್ಟಾರೆ ಕಾರ್ಯಕ್ರಮದ ರೂಪುರೇಷೆ ಹೇಗಿರಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹಂಚಿಕೊಳ್ಳುವುದಾಗಿ ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ತಿಳಿಸಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ