CrimeNEWSನಮ್ಮರಾಜ್ಯ

ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ(94) ಶನಿವಾರ ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಿ.ಮಾದೇಗೌಡ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ ಗುಂಡೂರಾವ್‌ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.

ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...