CrimeNEWSನಮ್ಮರಾಜ್ಯ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ಕಾಮುಕರ ಗಲ್ಲಿಗೇರಿಸಲು ಯತ್ನಾಳ್ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಮೈಸೂರಿನಲ್ಲಿ ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರನ್ನು ಪತ್ತೆಹಚ್ಚಿ  ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಇಂತಹ ಕಾಮುಕರನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ ಎಂದು ಅಭಿಪ್ರಾಯಪಟ್ಟರು.

ಅಲ್ಲದೆ ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡಬಾರದು, ಕಾಲ ಮಿತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಆಗ ಇಂತಹ ಪ್ರಕರಣಗಳು ಕಡಿಮೆಯಾಗುತ್ತವೆ ಎಂದರು.

ಆರೋಪಿಗಳು ಪರಾರಿಯಾಗಲು ಯತ್ನಿಸಿದರೆ ಎನ್‍ಕೌಂಟರ್ ಮಾಡಬೇಕು. ದುಷ್ಟ ಶಕ್ತಿಗಳಿಗೆ ಇಂತಹ ಶಿಕ್ಷೆಗಳು ಅನಿವಾರ್ಯ. ವಿಶೇಷ ಕೋರ್ಟ್ ರಚನೆ ಮಾಡಿ ಶೀಘ್ರವೇ ದುಷ್ಟರಿಗೆ ಕಠಿಣ ಶಿಕ್ಷೆಯಾಗಬೇಕು. 6 ತಿಂಗಳಲ್ಲಿ ನಿರ್ಣಯವಾಗಬೇಕು ಎಂದು ಆಗ್ರಹಿಸಿದರು.

ನಡೆಯಬಾರದ ಘಟನೆ ನಡೆದಿದೆ. ಗೃಹ ಸಚಿವರು ಇಂದು ಮೈಸೂರಿಗೆ ಭೇಟಿ ನೀಡಿದ್ದಾರೆ. ಅವರು ಪ್ರಾಮಾಣಿಕರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುಲ್ಲಿ, ಅತ್ಯಾಚಾರ, ದೌರ್ಜನ್ಯ ನಿಗ್ರಹ ಮಾಡಲು ಅವರು ಸಮರ್ಥರಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ