ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಕಳೆದ ಏಪ್ರಿಲ್ನಲ್ಲಿ ಹೂಡಿದ ಮುಷ್ಕರದ ವೇಳೆ ಹೈ ಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) 8012/2021 ಅನ್ನು ಹೈ ಕೋರ್ಟ್ ವಜಾಗೊಳಿಸಿದೆ.
ಸೋಮವಾರ ಮಧ್ಯಾಹ್ನದ ನಂತರ ಮುಖ್ಯನ್ಯಾಯಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ಕೈ ಗೆತ್ತಿಕೊಂಡು ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಪ್ರಕರಣವನ್ನು ವಜಾಗೊಳಿಸಿತು.
ಜತೆಗೆ ನೌಕರರಿಗೆ ಆಗುತ್ತಿರುವ ಸಮಸ್ಯೆಗೆ ಸಂಬಂಧಿಸಿದಂತೆ ಕಳಹಂತದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಇನ್ನು ಕಳೆದ ಏಪ್ರಿಲ್ನಿಂದ ಇಲ್ಲಿಯವರೆಗೂ ನಡೆದ ಪ್ರಕರಣ ಈಗ ವಜಾಗೊಂಡಿದೆ. ಈ ಮೂಲಕ ನೌಕರರಲ್ಲಿ ನಿರಾಸೆ ತಂದಿದೆ.