NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷೆ ನಡೆಸಲು ಗ್ರೀನ್‌ ಸಿಗ್ನಲ್‌ ತೋರಿದ ಹೈ ಕೋರ್ಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾದ ಭೀತಿಯ ಈ ಸಮಯದಲ್ಲೂ 2020-21ರ ಶೈಕ್ಷಣಿಕ ವರ್ಷದ SSLC ಪರೀಕ್ಷೆಯನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಹೀಗಾಗಿ ಈ ಮುಂಚೆಯೇ ನಿರ್ಧಿಸಿದಂತೆ ಪರೀಕ್ಷೆ ಜುಲೈ 19 ಮತ್ತು 22ಕ್ಕೆ ನಡೆಯಲಿದೆ.

ಕೊರೊನಾ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಎಸ್‌ವಿ ಸಿಂಗ್ರೇ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿದೆ.

ಎರಡು ದಿನಗಳ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಪರ ಹಾಜರಾದ ಅಡ್ವೊಕೇಟ್ ಜನರಲ್ (ಎಜಿ) ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿ, ನಾವು ಒಂದು ತರಗತಿಯಲ್ಲಿ ಕೇವಲ 12 ವಿದ್ಯಾರ್ಥಿಗಳನ್ನು ಹೊಂದಿದ್ದೇವೆ. ಒಬ್ಬ ವಿದ್ಯಾರ್ಥಿಗೆ ಒಂದು ಮೇಜು. ಸಾಮಾಜಿಕ ಅಂತರವಿರಲಿದ್ದು ಆರೋಗ್ಯ ತಪಾಸಣೆಗಾಗಿ 2 ಅರೆವೈದ್ಯಕೀಯ ಸಿಬ್ಬಂದಿ ಇರುತ್ತಾರೆ ಎಂದು ವಾದ ಮಂಡಿಸಿದರು. ರಾಜ್ಯ ಸರ್ಕಾರದ ವಾದವನ್ನು ಗಮನಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಾಲಯವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವಂತ ಯಾವ ವಿಷಯವೂ ಅರ್ಜಿಯಲ್ಲಿ ಕಂಡು ಬಂದಿಲ್ಲ.  ಹೀಗಾಗಿ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಎಲ್ಲ ಮಧ್ಯಸ್ಥಗಾರರಿಂದ ಪಾಲಿಸಬೇಕಾದ ಎಸ್‌ಒಪಿ ಅನ್ನು ಸುತ್ತೋಲೆ ರೂಪದಲ್ಲಿ ನೀಡುವ ಮೂಲಕ ಪರೀಕ್ಷೆಯನ್ನು ನಡೆಸಲು ರಾಜ್ಯವು ಕಾಳಜಿ ವಹಿಸಿದೆ ಎಂಬುವುದು ತಿಳಿದು ಬಂದಿದೆ.   ಇನ್ನು ಅರ್ಜಿಯಲ್ಲಿ ನಮಗೆ ಯಾವ ಗಮನಾರ್ಹ ಅಂಶಗಳು ಕಂಡುಬಂದಿಲ್ಲವಾದ್ದರಿಂದ, ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಪೀಠ ಹೇಳಿದೆ.

ಅರ್ಜಿದಾರರು ತಮ್ಮ ಮನವಿಯಲ್ಲಿ, ಕೆಲವು ಸಂಸ್ಥೆಗಳಲ್ಲಿ ಆನ್‌ಲೈನ್ ತರಗತಿಗಳನ್ನು ಸರಿಯಾಗಿ ನಡೆಸಲಾಗಿಲ್ಲ ಮತ್ತು ಅನೇಕ ಮಕ್ಕಳು ಆನ್‌ಲೈನ್ ತರಗತಿಗಳ ಮೂಲಕ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ವಾದಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು