ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕಣ ಸಂಬಂಧ ಹೈಕೋರ್ಟ್ 7 ಜನರಿಗೆ ನೋಟಿಸ್ ನೀಡಿದೆ.
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನಡೆಸಿತು.
ಇಂದು ವಾದ ಮಂಡಿಸುವಾಗ ಯಡಿಯೂರಪ್ಪ ಅವರು ಈಗ ಸಿಎಂ ಸ್ಥಾನದಲ್ಲಿ ಇಲ್ಲ. ಹೀಗಾಗಿ ಪೂರ್ವಾನುಮತಿ ಅಗತ್ಯವಿಲ್ಲವೆಂದು ಟಿ.ಜೆ. ಅಬ್ರಹಾಂ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು, ಜತೆಗೆ ಈಗ ಪೂರ್ವಾನುಮತಿ ಕುರಿತಾಗಿ ವಾದ ಆಲಿಸಬೇಕಾದ ಅಗತ್ಯ ಹಿನ್ನೆಲೆಯಲ್ಲಿ ಈಗ ನೋಟಿಸ್ ಜಾರಿ ಮಾಡಿದೆ.
ಇನ್ನು ಈ ವಿಚಾರಣೆ ಕೈಗೆತ್ತಿಕೊಂಡ ಏಕಸದಸ್ಯ ಪೀಠ ಕೆಲವೊಂದು ಮಾಹಿತಿ ಆಲಿಸಿದ ಬಳಿಕ ಯಡಿಯೂರಪ್ಪ ಸೇರಿ ಪ್ರತಿವಾದಿಗಳಿಗೆ ನೋಟಿಸ್ ನೀಡಿತು. ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ಅವರಿಗೆ ನೋಟಿಸ್ ನೀಡಲಾಗಿದೆ.